Advertisement

ಸಂಪೂರ್ಣ ಲಾಕ್ ಡೌನ್ ಮಾಡಿ, ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ: ಎಚ್ ಡಿಕೆ

01:37 PM Jun 23, 2020 | keerthan |

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ನಗರದ ಕೆಲವೇ ಪ್ರದೇಶದಗಳಲ್ಲಿ ಸೀಲ್ ಡೌನ್ ಮಾಡಿದರೆ ಪ್ರಯೋಜನವಿಲ್ಲ, ನಗರವನ್ನು ಕನಿಷ್ಠ 20 ದಿನವಾದರೂ ಸಂಪೂರ್ಣ ಲಾಕ್ ಡೌನ್ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Advertisement

ಈ ಕುರಿತು ಟ್ವೀಟ್ ಮಾಡಿರುವ ಎಚ್ ಡಿಕೆ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಹೇಳಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದರು.

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು

Advertisement

Udayavani is now on Telegram. Click here to join our channel and stay updated with the latest news.

Next