Advertisement
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದಿದ್ದಾರೆ.
Related Articles
Advertisement
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಎಚ್ ಡಿಕೆ ಹೇಳಿದ್ದಾರೆ.