Advertisement

ಪ್ರಧಾನಿ ವಿರುದ್ಧ ಎಚ್‌ಡಿಕೆ ಟ್ವೀಟ್‌

11:23 PM Feb 18, 2020 | Team Udayavani |

ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಭಾರತದ ಭೇಟಿ ವೇಳೆ ಅಹಮದಾಬಾದ್‌ನ ಕೊಳೆಗೇರಿಗಳು ಕಾಣದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ. ಆದರೆ, ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

Advertisement

ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶ ದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗಸಮಸ್ಯೆ ಮರೆ ಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ ಎಂದು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next