Advertisement

ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ

04:49 PM Aug 10, 2022 | Team Udayavani |

ಬೆಂಗಳೂರು: ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರ ವಿರುದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತೆ ಕಿಡಿ ಕಾರಿದ್ದಾರೆ.

Advertisement

ಈ ಬಗ್ಗೆ ಮತ್ತೆ ಸರಣಿ ಟ್ವೀಟ್ ಮಾಡಿರುವ ಹೆಚ್ ಡಿಕೆ ,ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ. ಡಿಕೆ ಬ್ರದರುಗಳ ಮುಂದೆ ತೋಳೆರಿಸಿದಂತೆ ನನ್ನ ಹತ್ತಿರ ನಡೆಯಲ್ಲ. ನನ್ನ ಶಕ್ತಿ ಏನೆಂಬುದು ನಿಮಗೆ, ನಿಮ್ಮ ಪಕ್ಷಕ್ಕೆ ಚೆನ್ನಾಗಿ ಗೊತ್ತು. ಈಗಲೂ ಸವಾಲು ಹಾಕುತ್ತಿದ್ದೇನೆ. ಕಲಾಪ ಕರೆದು ನೋಡಿ, ನಿಮ್ಮದೆಲ್ಲ ಬಿಚ್ಚಿಡುತ್ತೇನೆ. ಅನುಮಾನವೇ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾರು? ಎಲ್ಲಿ? ಹೇಗೆ? ಫೈಲ್ಯೂರ್ ಆಗಿದ್ದಾರೆ ಎನ್ನುವುದು ನನಗೂ ಗೊತ್ತು. ಕಳೆದ 3 ವರ್ಷದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯುತ್ತಾ ಓತಲಾ ಹೊಡೆದವರು ಯಾರು? ಮುಕ್ಕಿಮುಕ್ಕಿ ಲೂಟಿ ಹೊಡೆದವರು ಯಾರು? ಎನ್ನುವುದು ನನಗಿಂತ ನಿಮಗೆ ಚೆನ್ನಾಗಿ ಗೊತ್ತಿರಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಾನು ಫೈವ್ ಸ್ಟಾರ್ ಹೊಟೇಲಿನಲ್ಲಿ ಇದ್ದೆ, ಆದನ್ನು ನಾನೇ ಹೇಳಿದ್ದೇನೆ. ಇದೇನು ಹೊಸ ವಿಷಯ ಅಲ್ಲ. ನಿಮ್ಮ ಪಕ್ಷದ ಅಮಿತ್ ಶಾ, ಜೆ.ಪಿ.ನಡ್ಡಾ, ಅರುಣ್ ಸಿಂಗ್ ಎಲ್ಲರೂ ಬೆಂಗಳೂರಿಗೆ ಬಂದಾಗ ಅದೇ ಫೈವ್ ಸ್ಟಾರ್ ಹೊಟೇಲಿನಲ್ಲಿಯೇ ಇದ್ದರಲ್ಲವೆ? ಅವರು ಅಲ್ಲಿದ್ದಾಗ ನಿಮ್ಮ ಕಣ್ಣಿಗೆ ಪೊರೆ ಬಂದಿತ್ತಾ? ಎಂದು ಟೀಕಿಸಿದ್ದಾರೆ.

ಮೊನ್ನೆಯಷ್ಟೆ ಬಂದು ಹೋದ ಅಮಿತ್ ಶಾ ಅವರು ಯಾವ ಹೋಟೆಲ್ ನಲ್ಲಿ ಬಿಡಾರ ಹೂಡಿದ್ದರು? ನಿಮ್ಮ ನಾಯಕರೆಲ್ಲ ಬೆಂಗಳೂರಿಗೆ ಬಂದಾಗ ಕೃಷ್ಣಾ, ಅನುಗ್ರಹ ಅಥವಾ ಕಾವೇರಿ ಹಿಂದೆ ಗುಡಿಸಿಲಿನಲ್ಲಿ ಮಲಗುತ್ತಾರಾ? ಹೇಳಿಯಪ್ಪ ಅಶ್ವತ್ಥನಾರಾಯಣ? ನಕಲಿ ಸರ್ಟಿಫಿಕೇಟ್ ಡೀಲರ್ ಯಾರು? ಬ್ಲ್ಯಾಕ್ ಮೇಲರ್ ಯಾರು? ಬಿಲ್ಡರ್ ಯಾರು? ಎನ್ನುವುದು ನನಗಿಂತ ನಿಮ್ಮ ಪಕ್ಷದ ನಾಯಕರಿಗೆ ಚೆನ್ನಾಗಿ ಗೊತ್ತಿದೆ. ಬಿಲ್ ಮಾಡಿಕೊಳ್ಳಬೇಕಾದರೆ ಯಾರಿಗೆಲ್ಲ ಬ್ಲಾಕ್ ಮೇಲ್ ಮಾಡಿದಿರಿ?  ಅಕ್ರಮಗಳ ಗೂಡಿಗೆ ಯಾರಿಂದ ಬೆಂಕಿ ಹಾಕಿಸಿದಿರಿ? ಎನ್ನುವುದನ್ನೂ ಬಲ್ಲೆ ಎಂದು ವ್ಯಂಗ್ಯವಾಡಿದ್ದಾರೆ.

Advertisement

ಮಲ್ಲೇಶ್ವರದಲ್ಲಿ ನೀವು ನಡೆಸಿರುವ ಕರ್ಮಕಾಂಡವನ್ನು ಬಿಚ್ಚಿಡುತ್ತೇನೆ. ಕಲಾಪ ನಡೆಸಿ ನೋಡಿ. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎನ್ನುವಂತೆ ಮಲ್ಲೇಶ್ವರದಲ್ಲಿ ನಿಮ್ಮ ಸದಾರಮೆ ಶೋಕಿ ಎಂಥದು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತಾಗಿದೆ.ನಾನು ಕಲಾಪ ನಡೆಸಿ ಎಂದಷ್ಟೇ ಕೇಳಿದೆ. ನಾನು ನಿಮ್ಮ ಹೆಸರೆತ್ತಲಿಲ್ಲ. ನಿಮಗೆ ಗೊತ್ತಿರಲಿ. ಆದರೆ,  ನಿಮಗ್ಯಾಕೆ ಸಿಟ್ಟು ಬಂತೋ ನಾ ಕಾಣೆ. ಪಿಎಸ್ಐ ಅಕ್ರಮ, ಪ್ರಾಧ್ಯಾಪಕರ ನೇಮಕ ಅಕ್ರಮ, ಬಿಲ್ಲುಗಳ ಭಾಗವತ, ಮಹಾ ಡೀಲುಗಳ ಬಗ್ಗೆ ಚರ್ಚೆ ಮಾಡೋಣ. ನಾನು ತಯಾರಿದ್ದೇನೆ. ಕಲಾಪ ಕರಪಂಗನಾಮ ಬೂಟಾಟಿಕೆದಾಸಯ್ಯನಿಗೆಮೈಯ್ಯೆಲ್ಲಾ_ಪಂಗನಾಮ ಎಂದು ವ್ಯಂಗ್ಯವಾಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next