Advertisement

ಮಂಡ್ಯ, ತುಮಕೂರು ಜಿಲ್ಲೆಯ ಶಾಸಕರೊಂದಿಗೆ ಎಚ್ಡಿಕೆ ವಿಡಿಯೋ ಕಾನ್ಫರೆನ್ಸ್

04:34 PM Apr 02, 2020 | keerthan |

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಇಂದು ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಲ್ಲಿ ಚರ್ಚಿಸಿ ಜಿಲ್ಲೆಗಳಲ್ಲಿ ವ್ಯಾಪಕವಾಗುತ್ತಿರುವ ಕೋವಿಡ್-19 ವೈರಸ್ ಮತ್ತು ಲಾಕ್ ಡೌನ್ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು.

Advertisement

ವಿಡಿಯೊ ಕಾನ್ಫರೆನ್ಸ್ ನಲ್ಲಿ ಮಂಡ್ಯ ಶಾಸಕ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ, ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ, ಶಿರಾ ಶಾಸಕ ಸತ್ಯನಾರಾಯಣ ಪಾಲ್ಗೊಂಡಿದ್ದರು.

ಕೋವಿಡ್-19 ವೈರಸ್ ತಡೆಗೆ ಎರಡೂ ಜಿಲ್ಲೆಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕುಮಾರಸ್ವಾಮಿ ಚರ್ಚಿಸಿದರು.

ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವವರಿಗೆ, ಪ್ರಮುಖವಾಗಿ ರೈತರಿಗೆ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಕ್ಷೇತ್ರದ ಮಟ್ಟದಲ್ಲಿ ನೀಡುವಂತೆ ಸೂಚಿಸಿದರು.

ರಾಮನಗರ, ಚನ್ನಪಟ್ಟಣದಲ್ಲಿ ತಾವು ಆರಂಭಿಸಿರುವ ‘ಎಚ್ಡಿಕೆ ಜನತಾ ದಾಸೋಹ’ವನ್ನು  ಎಲ್ಲರೂ ಆರಂಭಿಸಿ ಹಸಿದವರಿಗೆ ಆಹಾರ ಪೂರೈಸುವಂತೆ ತಿಳಿಸಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next