Advertisement

HDK ತೀವ್ರ ಅಸ್ವಸ್ಥ: ವಿಕ್ರಮ್‌ ಆಸ್ಪತ್ರೆಗೆ ದಾಖಲು 

09:03 AM Mar 04, 2017 | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ತೀವ್ರ ಅಸ್ವಸ್ಥರಾಗಿದ್ದು ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement

ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರು ಶುಕ್ರವಾರ ಸಂಜೆಯೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಸ್ಪತ್ರೆಯ ವೈದ್ಯ ಡಾ.ಸತೀಶ್‌ ಅವರು ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ. ಫ್ಲೋ ಕಂಜಮ್ಷನ್‌ ನಿಂದ ಉಸಿರಾಟದ ಸಮಸ್ಯೆಯಾಗಿದೆ. ಅವರಿಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಿದ್ದೇವೆ . ಮನೆಗೆ ತೆರಳಿದರೆ ವಿಶ್ರಾಂತಿ ಸಿಗುವುದು ಕಷ್ಟ ಹೀಗಾಗಿ ಇಲ್ಲಿಯೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಡಾ. ಸತೀಶ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಕಳೆದ 2 ದಿನಗಳಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿ ಎಚ್‌ಡಿಕೆ ಅವರು ತೀವ್ರ ವಾಗಿ ಬಳಲಿದ್ದರು,ಮಾತ್ರವಲ್ಲದೆ ಬೆಂಬಲಿಗರು ಸಿಡಿಸಿದ ಪಟಾಕಿ ಹೊಗೆಯಿಂದ ಅವರಿಗೆ ಉಸಿರಾಟದ ಸಮಸ್ಯೆಯಾಗಿತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next