ದೊಡ್ಡಬಳ್ಳಾಪುರ: ತಾವು ಬಿಜೆಪಿ ಬಿಡುವ ಬಗ್ಗೆ ವದಂತಿಗಳು ಹಬ್ಬಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಅವರನ್ನು ಭೇಟಿ ಮಾಡಿ ವಂದಂತಿಗಳ ಕುರಿತು ವಿವರ ನೀಡಲಾಗಿದೆ ಎಂದು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ತಿಳಿಸಿದ್ದಾರೆ. ತಾಲೂಕಿನ ಗುಂಡಮಗೆರೆ ಕೆರೆ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಪಕ್ಷದ ಸಂಘಟನೆ ನೋಡಿ ಸಹಿಸದ ವಿರೋಧ ಪಕ್ಷದವರು ಇಲ್ಲಸಲ್ಲದ ವಂದತಿ ಹಬ್ಬಿಸುತ್ತಿದ್ದಾರೆ.ಯಾವುದೇ ಟೀಕೆಗಳಿಗೆ ಕಿವಿಗೊಡದೆ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮಾತನಾಡಿ, ಕಳೆದ ಐದು ತಿಂಗಳಿಂದಲೂ ಜೆ.ನರಸಿಂಹಸ್ವಾಮಿ ಅವರು ಪಕ್ಷ ತೊರೆಯುತ್ತಾರೆ ಎನ್ನುವ ಗಾಳಿ ಸುದ್ದಿ ಕೆಲ ಮಾಧ್ಯಮಗಳಲ್ಲಿ ಬರುತ್ತಿದೆ. ಇದಕ್ಕೆ ಸ್ವತಃ ನರಸಿಂಹಸ್ವಾಮಿ ಅವರು ಸಾಕಷ್ಟು ಬಾರಿ ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ತಾಲೂಕಿನ ರಾಜಘಟ್ಟ ಆಂಜನೇಯಸ್ವಾಮಿ ದೇವಾಲಯದಲ್ಲಿ ಗಣೇಶ ಹಬ್ಬದ ದಿನ ಪೂಜೆ ಸಲ್ಲಿಸಿ ಮನೆ ಮನೆ ಪ್ರಚಾರ ಪ್ರಾರಂಭಿಸಿದ್ದಾರೆ ಎಂದು ಹೇಳಿದರು. ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಕಾಂಗ್ರೆಸ್ ಪಕ್ಷದವರು ಬಿಜೆಪಿ ಪಕ್ಷದ ಸಂಘಟನೆಯನ್ನು ನೋಡಿ ನಕಲು ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಗೊಂದಲಗಳು ಇಲ್ಲದೇ ಜೆ.ನರಸಿಂಹಸ್ವಾಮಿ ಅವರೇ ನಮ್ಮ ಪಕ್ಷದ ಏಕೈಕ ಅಧಿಕೃತ ಅಭ್ಯರ್ಥಿ ಎನ್ನುವುದು ಇಡೀ ಕ್ಷೇತ್ರದ ಮತದಾರರಿಗೆ ತಿಳಿದಿದೆ.
ಅಲ್ಲದೇ ಈ ಹಿಂದೆಯು ನಮ್ಮ ಪಕ್ಷದ ಅ¸Âರ್ಥಿ ವಿರುದ್ಧ ವಿರೋಧ ಪಕ್ಷಗಳು ವಂದತಿಗಳನ್ನು ಹಬ್ಬಿಸಿದ್ದಾಗ ಜೆ.ನರಸಿಂಹಸ್ವಾಮಿ ಅವರು ತಮ್ಮ ಮಗನ ಮೇಲೆ ಪ್ರಮಾಣ ಮಾಡಿ ಹೇಳಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ ಎಂದು. ಇಷ್ಟಾದರೂ ಕೆಲವರು ಉದ್ದೇಶ ಪೂರಕವಾಗಿ ಸುಳ್ಳು ಸುದ್ದಿ ಹರಡಲು ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಪುಷ್ಪಾ, ಜಿಲ್ಲಾ ಮುಖಂಡ ಅಶ್ವತ್ಥ ನಾರಾಯಣ ಕುಮಾರ್, ಪಿ.ಸಿ.ಮೋಹನ್ ಕುಮಾರ್, ಯುವ ಬಿಜೆಪಿ ಜಿಲ್ಲಾ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ನಗರ ಅಧ್ಯಕ್ಷ ಬಂತಿವೆಂಕಟೇಶ್, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್, ಚನ್ನರಾಮಣ್ಣ ಇದ್ದರು.