Advertisement
ಡಿಸಿಎಂ ಸಮರ್ಥನೆಸಚಿವ ಡಿ. ಸುಧಾಕರ್ ಅವರನ್ನು ಸಮರ್ಥನೆ ಮಾಡಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, “ಈ ಬಗ್ಗೆ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಇದೊಂದು ಸುಳ್ಳು ಕೇಸ್. ಹೀಗಾಗಿ ಸುಧಾಕರ್ ರಾಜೀನಾಮೆ ನೀಡುವ ಅಗತ್ಯವಿಲ್ಲ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ’ ಎಂದು ತೀರ್ಪಿತ್ತಿದ್ದಾರೆ.
ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವರು ಸೆಪ್ಟಂಬರ್ 10ರಂದು ಯಲಹಂಕ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಸೆವೆನ್ ಹಿಲ್ಸ… ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರರಾದ ಸಚಿವ ಡಿ.ಸುಧಾಕರ್, ಶ್ರೀನಿವಾಸ್, ಭಾಗ್ಯಮ್ಮ ವಿರುದ್ಧ ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ 1.30 ಎಕರೆ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿ¨ªಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸೆಗಿ¨ªಾರೆ. ಮಹಿಳೆಯರನ್ನು ಕರೆದುಕೊಂಡು ಬಂದು ಹÇÉೆ ಮಾಡಿ¨ªಾರೆ ಎಂದು ದೂರು ನೀಡಿದ್ದರು. ಸಚಿವ ಸುಧಾಕರ್ ಹಾಗೂ ಬೆಂಬಲಿಗರು ತಮ್ಮ ವಿರುದ್ಧ ಜಾತಿ ನಿಂದನೆ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದರು.
Related Articles
ಈ ವಿಚಾರದಲ್ಲಿ ಹೋರಾಟ ತೀವ್ರಗೊಳಿಸಲು ವಿಪಕ್ಷ ಬಿಜೆಪಿ ನಿರ್ಧರಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಸಂಬಂಧ ಸುದೀರ್ಘ ಚರ್ಚೆಯಾಗಿದ್ದು, ಸುಧಾಕರ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲು ನಿರ್ಧರಿಸಲಾಗಿದೆ.
Advertisement
ಸಚಿವ ಸುಧಾಕರ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆಯೇ? ನಾನೂ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ನೋಡಿದ್ದೇನಷ್ಟೇ. ಸುಧಾಕರ್ ಅವರನ್ನು ಕರೆದು ಮಾತನಾಡುತ್ತೇನೆ.-ಸಿದ್ದರಾಮಯ್ಯ, ಸಿಎಂ ಸುಪ್ರೀಂಕೋರ್ಟ್ ನಿರ್ದೇಶನ ಇದೆ. ಯಾರ ಮೇಲೆ ದೂರು ಕೊಟ್ಟರೂ ಎಫ್ಐಆರ್ ಹಾಕುತ್ತಾರೆ. ಯಾರೋ ದುರುದ್ದೇಶದಿಂದ ದೂರು ಕೊಟ್ಟಿರಬಹುದು. ಎಫ್ಐಆರ್ ಹಾಕಿದ ತಕ್ಷಣ ಅಪರಾಧಿ ಆಗಲ್ಲ. ಪೊಲೀಸರು ಪರಿಶೀಲಿಸುತ್ತಾರೆ. ಅದರಲ್ಲಿ ಹುರುಳಿದ್ದರೆ, ಚಾರ್ಜ್‌ಶೀಟ್ ಆಗುತ್ತದೆ. ಇಲ್ಲದಿದ್ದರೆ ಬಿ ರಿಪೋರ್ಟ್ ಹಾಕುತ್ತಾರೆ.
-ರಾಮಲಿಂಗಾರೆಡ್ಡಿ , ಸಾರಿಗೆ ಸಚಿವ ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಎಂದು ಕೇಳುತ್ತೀರಲ್ಲವೇ ? ಈಗ ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಮಚ್ಚು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಿ. ನೀವು ಸದನದಲ್ಲಿ ಪಾಸು ಮಾಡಿಕೊಂಡ ದಲಿತಪರ ಕಾಳಜಿ ಬಿಲ್ ಕಸದ ಬುಟ್ಟಿಗೆ ಹಾಕಿ ಹಾಗಾದರೆ.
– ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸುಧಾಕರ್ ಮೊದಲು ರಾಜೀನಾಮೆ ನೀಡ ಬೇಕು. ಈ ಪ್ರಕರಣದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಮಧ್ಯ ಪ್ರವೇಶ ಮಾಡುತ್ತಿದ್ದಾರೆ. ಕಾನೂನು ಪ್ರಕಾರ ಗೃಹ ಸಚಿವರಿಗೆ ತನಿಖೆ ನಡೆಸಲು ಅವಕಾಶವಿಲ್ಲ. ಆ ಕೆಲಸ ಪೊಲೀಸರು ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯನವರಿಗೆ ಸಂವಿಧಾನದ ಮೇಲೆ ವಿಶ್ವಾಸವಿದ್ದರೆ ಸುಧಾಕರ್ ರಾಜೀನಾಮೆ ಪಡೆಯಲಿ.
-ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ