Advertisement

ಮುಂಜಾನೆ ಪಕ್ಷ ಸೇರಿಸಿಕೊಂಡು ಮಧ್ಯಾಹ್ನ ತಡೆಹಿಡಿದರು!

01:42 AM Apr 04, 2019 | Team Udayavani |

ಬೆಂಗಳೂರು: ಯಾದಗಿರಿ ಜಿಲ್ಲೆಯ ಬಿಜೆಪಿ ಮುಖಂಡರಾದ ಡಾ. ಭೀಮಮೇಟಿ,
ದೇವೇಂದ್ರ ಮುನವಟ್ಟು ಸೇರಿದಂತೆ ಕೆಲವು ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪಕ್ಷಕ್ಕೆ ಸೇರಿಸಿಕೊಂಡು ಮಧ್ಯಾಹ್ನ ಅವರ ಸೇರ್ಪಡೆಯನ್ನು ತಡೆ ಹಿಡಿದ ಪ್ರಸಂಗ ನಡೆಯಿತು.

Advertisement

ಬುಧವಾರ ಪಕ್ಷದ ಕಚೇರಿಯಲ್ಲಿ ಯಾದಗಿರಿ ಜಿಲ್ಲೆಯ ಮುಖಂಡರನ್ನು ಪಕ್ಷದ ಶಾಲ್‌ ಹಾಕಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದರು. ಆದರೆ, ಅವರ ಸೇರ್ಪಡೆಗೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ವಿಶೇಷವಾಗಿ ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ್‌ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸ್ಥಳೀಯವಾಗಿ ಶಾಸಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಳಿಗ್ಗೆ ಪಕ್ಷಕ್ಕೆ ಸೇರಿಸಿಕೊಂಡ ನಾಯಕರ ಸೇರ್ಪಡೆಯನ್ನು ತಡೆ ಹಿಡಿಯಲಾಗಿದೆ ಎಂದು ಪ್ರಕಾಶ್‌ ರಾಠೊಡ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next