Advertisement

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

12:05 AM Jul 05, 2024 | Team Udayavani |

ಮಂಗಳೂರು: ದ.ಕ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದಾರೆ.

Advertisement

ಕೇಂದ್ರ ಬಂದರು, ನೌಕಾಯಾನ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್‌ ಅವರನ್ನು ಅವರ ದಿಲ್ಲಿಯ ನಿವಾಸದಲ್ಲಿ ಭೇಟಿಯಾಗಿ ಎನ್‌ಎಂಪಿಎ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್‌ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ, ಕ್ರೂಸ್‌ ಟರ್ಮಿನಲ್‌ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದ್ದು, ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು-ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆ ಕುರಿತು ಅಧ್ಯಯನ ನಡೆಸುವಂತೆ ಸಂಸದರು ಕೇಳಿಕೊಂಡಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿàಪ್‌ ಸಿಂಗ್‌ ಪುರಿ ಅವರನ್ನು ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡದಲ್ಲಿ ಪೆಟ್ರೋಲಿಯಂ ಇಲಾಖೆಗೆ ಸಂಬಂಧಿಸಿದ ಮತ್ತು ಜಿಲ್ಲೆಯ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು ಹಾಗೂ ಹಾಗೂ ಗ್ರೀನ್‌ ಹೈಡ್ರೋಜನ್‌ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಂಸದರು ಮಾಡಿದರು. ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರ್ಗದರ್ಶನ ಮತ್ತು ಸಹಕಾರವನ್ನು ನೀಡುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next