Advertisement

ಕುಂದಾಪುರ ಸಂಚಾರ ಠಾಣಾ ಸಿಬ್ಬಂದಿಗೆ ಸೋಂಕು ದೃಢ: ಎರಡು ದಿನ ಠಾಣೆ ಸೀಲ್ ಡೌನ್

12:37 PM Jul 05, 2020 | keerthan |

ಕುಂದಾಪುರ: ಇಲ್ಲಿನ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ.

Advertisement

ಕೋವಿಡ್-19 ಸೋಂಕು ದೃಢಪಟ್ಟ ಪೊಲೀಸ್ ಸಿಬ್ಬಂದಿಯವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುವುದು. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಸಮಯದಲ್ಲಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ತಾತ್ಕಾಲಿಕ ಠಾಣೆಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಂದಾಪುರ ಉಪವಿಭಾಗ ಎಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಶನಿವಾರ ಸಂಜೆಯ ವರದಿಯ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1277ಕ್ಕೆ ಏರಿಕೆಯಾಗಿದೆ. ಶನಿವಾರ 19 ಜನರಿಗೆ ಸೋಂಕು ತಾಗಿರುವುದು ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next