Advertisement
ನಮ್ಮ ಸುತ್ತಲೂ ಸಾಮಾನ್ಯವಾಗಿ ಸಿಗುವ ದಾಳಿಂಬೆ ಹಣ್ಣು ತನ್ನಲ್ಲಿ ಹಲವಾರು ಆರೋಗ್ಯದಾಯಕ ಅಂಶಗಳನ್ನು ಹೊಂದಿದೆ. ದಾಳಿಂಬೆ ಹಣ್ಣನ್ನು ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟು ಪ್ರಮಾಣದ ಪೋಷಕಾಂಶಗಳನ್ನು ಒದಗಿಸುತ್ತದೆಯೋ ಅದೇ ರೀತಿ ದಾಳಿಂಬೆ ಹಣ್ಣಿನ ಸಿಪ್ಪೆಯೂ ಹಲವು ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯ ನಿರ್ವಹಿಸುತ್ತದೆ.
Related Articles
Advertisement
ಅಜೀರ್ಣದ ಸಮಸ್ಯೆ ಪರಿಹಾರ
ಸಾಮಾನ್ಯವಾಗಿ ಮಕ್ಕಳಲ್ಲಿ ಹಾಗೂ ದೊಡ್ಡವರಲ್ಲಿ ಕಂಡುಬರುವ ಅಜೀರ್ಣದ ಸಮಸ್ಯೆಗೆ ದಾಳಿಂಬೆ ಸಿಪ್ಪೆಯು ಉತ್ತಮ ಔಷಧವಾಗಿದ್ದು, ಅತಿಸಾರ ಭೇದಿ ಉಂಟಾದಾಗ ಅಥವಾ ರಕ್ತ ಭೇದಿ ಸಮಸ್ಯೆ ಉಂಟಾದಾಗ ಒಣಗಿಸಿದ ದಾಳಿಂಬೆಯ ಸಿಪ್ಪೆಯನ್ನು ಲಿಂಬೆ ಹಣ್ಣಿನಲ್ಲಿ ತೇದಿ ಚೂರ್ಣವಾಗಿ ಮಾಡಿ ಸೇವಿಸುವುದರಿಂದ ಅತಿಸಾರದ ಸಮಸ್ಯೆ ಶೀರ್ಘವಾಗಿ ಗುಣಮುಖವಾತ್ತದೆ.
ಮೂಳೆಗಳ ಆರೋಗ್ಯಕ್ಕೆ ಸಹಕಾರಿ
ದಾಳಿಂಬೆ ಹಣ್ಣಿನಲ್ಲಿರುವ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣಗಳು ಮೂಳೆಗಳ ಸಾಂದ್ರತೆಯನ್ನು ಹೆಚ್ಚು ಮಾಡುತ್ತದೆ . ಅಧ್ಯಯನಗಳು ಹೇಳುವಂತೆ ದಾಳಿಂಬೆ ಹಣ್ಣಿನ ಸಿಪ್ಪೆಯ ಡಿಕಾಕ್ಷನ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಮೂಳೆಗಳ ಆರೋಗ್ಯ ಅತ್ಯುತ್ತಮವಾಗಿರುವ ಮೂಲಕ ಓಸ್ಟಿಯೋಪೋರೋಸಿಸ್ ಎಂಬ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.
2 ಚಮಚ ದಾಳಿಂಬೆ ಹಣ್ಣಿನ ಪುಡಿಯನ್ನು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಇದಕ್ಕೆ ಸ್ವಲ್ಪ ನಿಂಬೆ ಹಣ್ಣಿನ ರಸ ಮತ್ತು ಪುಡಿ ಉಪ್ಪು ಹಾಕಿ ಸೇವಿಸುವುದರಿಂದ ಮೂಳೆಗಳು ಸದೃಢವಾಗಿರುತ್ತದೆ.
ಹಲ್ಲಿನ ಆರೋಗ್ಯಕ್ಕೆ ಸಹಕಾರಿ
ಹಲ್ಲುಗಳಿಗೆ ಮತ್ತು ವಸಡುಗಳಿಗೆ ಸಂಬಂಧಪಟ್ಟ ಸಮಸ್ಯೆಗಳ ಪರಿಹಾಕ್ಕಾಗಿ ದಾಳಿಂಬೆ ಹಣ್ಣು ರಾಮಬಾಣವಾಗಿ ಕಾರ್ಯ ನಿರ್ವಹಿಸುತ್ತದೆ. ದಾಳಿಂಬೆ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿಕೊಂಡು ನೀರಿನಲ್ಲಿ ಒಂದು ಚಮಚ ದಾಳಿಂಬೆ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ನಂತರ ದಿನಕ್ಕೆ ಎರಡು ಬಾರಿ ಇದರಿಂದ ಬಾಯಿ ಮುಕ್ಕಳಿಸುವುದು ಹಲ್ಲು ಮತ್ತು ವಸಡುಗಳ ಸಮಸ್ಯೆಗೆ ಉತ್ತಮ ಔಷಧಿಯಾಗಿದೆ.
ಗಂಟಲು ಸಮಸ್ಯೆಗೆ ಪರಿಹಾರ
ಸಾಮಾನ್ಯವಾಗಿ ಹಲವರನ್ನು ಕಾಡುವ ಗಂಟಲು ಸಮಸ್ಯೆಗೆ ದಾಳಿಂಬೆ ಮದ್ದಾಗಿದ್ದು, ಗಂಟಲು ನೋವು, ಗಂಟಲು ಕಿರಿಕಿರಿ, ಇತ್ಯಾದಿಗಳಿಗೆ ದಾಳಿಂಬೆ ಹಣ್ಣಿನ ಪುಡಿಯನ್ನು ಬಳಕೆ ಮಾಡಬಹುದು.
ಒಂದು ಹಿಡಿ ದಾಳಿಂಬೆ ಹಣ್ಣಿನ ಒಣಗಿದ ಪುಡಿಯನ್ನು ತೆಗೆದುಕೊಂಡು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ಇದನ್ನು ಸೋಸಿಕೊಂಡು ಬಾಯಿ ಮುಕ್ಕಳಿಸಿದರೆ ಗಂಟಲು ನೋವು ಮತ್ತು ಗಂಟಲಿನ ಸಮಸ್ಯೆಗಳು ಉಪಶಮನವಾಗುತ್ತದೆ.
ಮುಖದ ಕಾಂತಿಗೆ ಉಪಕಾರಿ
ಮುಖದಲ್ಲಿ ಸುಕ್ಕುಗಳಾಗಿದ್ದರೆ ಅಥವಾ ಮುಖದ ಚರ್ಮ ಒಣಗಿರುವ ಅನುಭವವಾದಾಗ ದಾಳಿಂಬೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಹಾಲು ಬೆರಸಿ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿ. ಒಂದು ವೇಳೆ ನಿಮ್ಮದು ಎಣ್ಣೆಯುಕ್ತ ಚರ್ಮವಾಗಿದ್ದರೆ ರೋಸ್ ವಾಟರ್ ಅನ್ನು ಬಳಸಬಹುದಾಗಿದೆ.