Advertisement
ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಯೋಗ ಉತ್ತಮ ಉಪಾಯ. ಯೋಗ ಮಾಡುವುದರಿಂದ ಮನಸ್ಸು ಮತ್ತು ದೇಹ ಎರಡನ್ನೂ ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ದೈನಂದಿನ ಜೀವನದಲ್ಲಿ ಪುರುಷರು ಮತ್ತು ಮಹಿಳೆಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲಿಕ್ಕೆ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಯೋಗ ಸೂಕ್ತ ಮಾರ್ಗದರ್ಶಕವಾಗಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯದಲ್ಲಿ ಆಗಬಹುದಾದ ಬದಲಾವಣೆ ಅಥವಾ ಉಪಯೋಗಗಳನ್ನು ತಿಳಿದುಕೊಳ್ಳೋಣ.ಜೀವನದಲ್ಲಿ ಸಾಮಾನ್ಯವಾಗಿ ಬರುವಂತಹ ಅನೇಕ ಒತ್ತಡಗಳನ್ನು ಎದುರಿಸಲು ಮಾನಸಿಕ ಬಲ ಅಗತ್ಯ, ಇದನ್ನು ಯೋಗ ತಂದು ಕೊಡುವುದು, ಸಾರ್ಥಕ ಬದುಕಿಗಾಗಿ, ಶಿಸ್ತನ್ನು ಅಳವಡಿಸಿಕೊಳ್ಳಲು ಯೋಗ ಸೂಕ್ತ ಮಾರ್ಗವಾಗಿದೆ. ಮಾನಸಿಕ ಶಾಂತಿ
ಯೋಗಾಸನಗಳ ಜೊತೆಗೆ ಸೂರ್ಯ ನಮಸ್ಕಾರ, ಪ್ರಾಣಾಯಾಮ, ಧ್ಯಾನ ಕೂಡ ಉತ್ತಮ ಪೂರಕ ಮಾರ್ಗ ಹೌದು. ಇದರಿಂದ ಚಂಚಲತೆ ದೂರವಾಗಿ, ಮಾನಸಿಕವಾಗಿ ಶಾಂತಿ ಲಭಿಸುವದು, ಮನಸ್ಸನ್ನು ನಿಗ್ರಹಿಸುವ ಶಕ್ತಿ ವೃದ್ಧಿಯಾಗುವದು.
Related Articles
ಒಳ್ಳೆಯ ಆರೋಗ್ಯ ಎಂದರೆ ಕೇವಲ ರೋಗದಿಂದ ದೂರವಿರುವುದು ಮಾತ್ರವಲ್ಲ ಮನಸ್ಸು ಮತ್ತು ಭಾವನೆಗಳನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಮುಖ್ಯ. ಯೋಗ ಮಾಡುವುದರಿಂದ ದೃಢವಾಗಿ ಇರಲು ಜೊತೆಗೆ ಹಲವಾರು ರೋಗಗಳಿಂದ ದೂರವಾಗಿ ಸಂತೋಷ ಉಲ್ಲಾಸದಿಂದ ಇರಲು ಸಹಾಯವಾಗುತ್ತದೆ.
ಉತ್ತಮ ರಕ್ತ ಸಂಚಲನಕ್ಕಾಗಿ
ಉಸಿರಾಟದ ಮತ್ತು ಇತರ ಆಸನಗಳಿಂದ ದೇಹದ ರಕ್ತ ಸಂಚಲನವನ್ನು ಸರಾಗವಾಗಿಸುವಲ್ಲಿ ಯೋಗ ಸಹಕರಿಸುತ್ತದೆ. ಈ ಸರಾಗ ರಕ್ತಸಂಚಲನದಿಂದ ಆಮ್ಲಜನಕ ಮತ್ತು ಜೀವಸತ್ವಗಳು ದೇಹದ ಎಲ್ಲ ಭಾಗಗಳಿಗೂ ಸರಿಯಾಗಿ ಸಂಚಲನವಾಗುವುದರಿಂದ ಆರೋಗ್ಯಯುತ ಅಂಗಗಳು ಮತ್ತು ಕಾಂತಿಯುತವಾದ ಚರ್ಮವನ್ನು ಪಡೆಯಬಹುದು.
Advertisement
ಆರೋಗ್ಯಯುತವಾದ ಹೃದಯಕ್ಕಾಗಿಸ್ವಲ್ಪ ಕಾಲ ಉಸಿರನ್ನು ಬಿಗಿ ಹಿಡಿದು ಮಾಡುವ ಮತ್ತು ಇನ್ನಿತರ ಆಸನಗಳು ಹೃದಯ ಮತ್ತು ಅಪದಮನಿಯ ಆರೋಗ್ಯವನ್ನು ಕಾಪಾಡುತ್ತವೆ. ಯೋಗ ರಕ್ತಸಂಚಲನವನ್ನು ಸರಾಗವಾಗಿಸುವುದರಿಂದ ರಕ್ತ ಹೆಪ್ಪುಗಟ್ಟುವಿಕೆಯಂತಹ ಕ್ರಿಯೆಯಿಂದ ರಕ್ಷಿಸಿ ಹೃದಯವನ್ನು ಆರೋಗ್ಯಯುತವಾಗಿರಿಸಿತ್ತದೆ. ನೋವುಗಳನ್ನು ತಡೆಯುತ್ತದೆ
ಮನುಷ್ಯರಿಗೆ ಸಾಮಾನ್ಯವಾಗಿ ಕಾಡುವ ಸ್ಥೂಲತ್ವ, ಸೊಂಟ ನೋವು, ಬೆನ್ನು ನೋವು, ಹೊಟ್ಟೆ ನೋವು, ಕೀಲು ನೋವು, ಮುಟ್ಟಿನ ಸಮಸ್ಯೆ, ಮಲಬದ್ಧತೆ, ಉಸಿರಾಟದ ತೊಂದರೆ ಇನ್ನೂ ಹಲವಾರು ಸಮಸ್ಯೆಗಳಿಗೆ ಹಲವು ನಿರ್ಧಿಷ್ಟವಾದ ಆಸನಗಳನ್ನು ಕ್ರಮಬದ್ಧವಾಗಿ, ನಿಯಮಿತ ಆಹಾರ ಸೇವನೆಯಿಂದ ಅಳವಡಿಸಿಕೊಂಡರೆ ಸಮಸ್ಯೆಗಳನ್ನು ನಿವಾರಿಸಿಕೊಂಡು ಪರಿಹಾರ ಕಾಣಲು ಸಾಧ್ಯ.
ಉತ್ತಮ ಉಸಿರಾಟ ಕ್ರಿಯೆ
ಯೋಗದಲ್ಲಿ ಬರುವ ಧೀರ್ಘ ಉಸಿರಾಟ ಮತ್ತು ನಿಧಾನ ಉಸಿರಾಟದ ಆಸನಗಳಿಂದ ಶ್ವಾಸಕೋಶ ಮತ್ತು ಹೊಟ್ಟೆಯ ಸಾಮರ್ಥ್ಯವನ್ನು ಹೆಚ್ಚಿಸಬಹುದು . ಸಮತೋಲನವನ್ನು ಹೆಚ್ಚಿಸುತ್ತದೆ
ದಿನನಿತ್ಯದ ಜಂಜಾಟದಲ್ಲಿ ಕುಳಿತುಕೊಳ್ಳುವ ಬೇರೆಬೇರೆ ಭಂಗಿಯಿಂದಾಗಿ ವಯಸ್ಸಾಗುತ್ತಿದ್ದಂತೆ ನಾವು ನಮ್ಮ ಸಮತೋಲನವನ್ನು ಕಳೆದುಕೊಳ್ಳುತ್ತೇವೆ.ಈ ಕಾರಣದಿಂದಾಗಿ ಬೆನ್ನು ನೋವು, ಮೂಳೆಯ ಒಡೆತ, ಸೆಳೆತ ಇವುಗಳೆಲ್ಲ ಕಾಣಿಸಿಕೊಳ್ಳುತ್ತವೆ. ಯೋಗ ಮಾಡುವುದರಿಂದ ಈ ನೋವನ್ನು ನಿವಾರಿಸಿ ಸಮತೋಲನವನ್ನು ಕಾಪಾಡಿಕೊಂಡು ಹಿಡಿತದಲ್ಲಿರಬಹುದು. ಯೋಗಾಸನದ ಸಮಗ್ರ ಅನುಭವವಿರುವ ಗುರುವಿನ ಮೂಲಕ ಕಲಿತರೆ, ಸಂಪೂರ್ಣ ಯಶಸ್ಸು ನಮ್ಮದಾಗುವದು.