ಶನಿವಾರಸಂತೆ : ರಕ್ತದಾನ ವ್ಯಕ್ತಿಯ ಜೀವ ಉಳಿಸುವ ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅಭಿಪ್ರಾಯ ಪಟ್ಟರು ಅವರು ಸಮಿಪದ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ 2ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದರು. ರಕ್ತದಾನ ಶಿಬಿರಗಳಲ್ಲಿ ದಾನಿಗಳಿಂದ ಸಂಗ್ರಹಿಸಿದ ರಕ್ತವನ್ನು ರಕ್ತನಿಧಿ ಕೇಂದ್ರದಲ್ಲಿ ಪರೀಕ್ಷಿಸಿ ಯೋಗ್ಯವಾದ ರಕ್ತವನ್ನು ದಾನಿಗಳಿಗೆ ನೀಡಲಾಗುತ್ತದೆ, ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣನಂದ್ ಮಾತನಾಡಿರೋಗಿಗಳು ಆಸ್ಪತ್ರೆಗೆ ಬಂದು ಸೇವೆಯನ್ನು ಸದುಪಯೋಗಿಸಿಕೊಳ್ಳುವಂತೆ ಮನವಿ ಮಾಡಿದರು.
ಅರೆ ಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಮಾತನಾಡಿ-ರಕ್ತದಾನ ಜೀವವನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಈ ನಿಟ್ಟಿನಲ್ಲಿ ಅರೆ ಭಾಷೆ ಗೌಡ ಸಮಾಜ ಸದರಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದೆ ದಾನಿಗಳು ರಕ್ತದಾನ ಮಾಡುವ ಮೂಲಕ ತನ್ನ ಆರೋಗ್ಯವನ್ನು ವೃದ್ದಿಸಿಕೊಳ್ಳುವಂತೆ ಮನವಿ ಮಾಡಿದರು.ಅರೆ ಭಾಷೆ ಗೌಡ ಸಮಾಜದ ಕಾರ್ಯದರ್ಶಿ ಕುಯ್ಯುಮುಡಿ ಜಯಕುಮಾರ್, ಆರೋಗ್ಯ ಇಲಾಖೆಯ ಶಿವಪ್ರಕಾಶ್, ಮುರುಳೀಧರ್, ಉಪಸ್ಥಿತರಿದ್ದರು.