Advertisement

ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಕಳಪೆ

12:57 PM Dec 02, 2019 | Suhan S |

ಸಾವಳಗಿ: ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕಾಮಗಾರಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Advertisement

ಸಾವಳಗಿ ಹೋಬಳಿ ಜಮಖಂಡಿ ತಾಲೂಕಿನಲ್ಲಿ ಅತಿಹೆಚ್ಚು ಹಳ್ಳಿಗಳನ್ನು ಹೊಂದಿರುವ ದೊಡ್ಡ ಹೋಬಳಿ.ಹೀಗಾಗಿ ಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರೋಗಿಗಳ ಸಂಖ್ಯೆ ಹೆಚ್ಚಿದೆ. ಇದರಿಂದ ಗ್ರಾಮಸ್ಥರುಹಿಂದಿನ ಶಾಸಕ ಸಿದ್ದು ನ್ಯಾಮಗೌಡರಿಗೆ ಸಾವಳಗಿಯಲ್ಲಿಉನ್ನತ ಮಟ್ಟದ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆಸ್ಪಂದಿಸಿ 2 ಕೋಟಿ ವೆಚ್ಚದ ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ್ದರು.

ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದೆ. ಆದರೆ,ಕಟ್ಟಡ ಕಾಮಗಾರಿಯ ಗುತ್ತಿಗೆ ಪಡೆದ ಗುತ್ತಿಗೆದಾರ ಕಾಮಗಾರಿಯ ವೀಕ್ಷಣೆಗೆ ಬರದೆ ನಿರ್ಲಕ್ಷ್ಯ ವಹಿಸಿದ್ದಾನೆ. ಸರಕಾರಿ ಕಟ್ಟಡಗಳ ಬಗ್ಗೆ ನಿರ್ಲಕ್ಷತನ ತೋರಿರುವ ಗುತ್ತಿಗೆದಾರನಿಗೆ ಪಾವತಿಸಬೇಕಾದ ಮೊತ್ತವನ್ನು ತಡೆಹಿಡಿದು ಕಾಮಗಾರಿ ಗುಣಮಟ್ಟದಿಂದಮಾಡಿದ ನಂತರ ಬಾಕಿ ಹಣವನ್ನು ಪಾವತಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ದೂರದ ಜಮಖಂಡಿಗೆ ಪಟ್ಟಣಕ್ಕೆ ಹೋಗುವ ಬದಲು ಇಲ್ಲಿಯೇ ವ್ಯವಸ್ಥೆ ಮಾಡಲಾಗಿದೆ. ಸಾವಳಗಿ ಗ್ರಾಮದ ಆರೋಗ್ಯ ಕೇಂದ್ರದಲ್ಲಿಯೆ ಮರಣೋತ್ತರ ಪರಿಕ್ಷೆ ಮಾಡಲು ಅಧಿಕಾರಿಗಳು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದ್ದಾರೆ. ಶವ ಸಂಸ್ಕಾರ ಕೊಠಡಿಯು ಕಾಂಪೌಂಡ್‌ ಹಾಗೂ ಕೊಠಡಿ ಸ್ವಲ್ಪ ಪ್ರಮಾಣದಲ್ಲಿ ಕುಸಿದು ಬಿದ್ದಿದೆ. ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ ಇಲ್ಲ.ಹೀಗಾಗಿ ಕೊಠಡಿಗೆ ಕಾಂಪೌಂಡ್‌ ನಿರ್ಮಿಸಿ ಹಾಗೂಬೆಳಕಿನ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ಸರಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿಯೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ವಾಸಿಸಲು ಕೊಠಡಿ ನಿರ್ಮಿಸಲಾಗಿದೆ. ಕೊಠಡಿಗಳು ಶಿಥಿಲಗೊಂಡಿವೆ. 24 ಗಂಟೆ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದರೆ ಸಿಬ್ಬಂದಿಗಳಕೊಠಡಿಯನ್ನು ಸುಸಜ್ಜಿತವಾಗಿ ನಿರ್ಮಿಸಿ ವಾಸಿಸಲು ಅನುಕೂಲ ಮಾಡಿಕೊಟ್ಟರೆ ಮಾತ್ರ ಸಾಧ್ಯವೆಂದು ಸಿಬ್ಬಂದಿ ತಿಳಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕಟ್ಟಡ ಕಾಮಗಾರಿ ಪರಿಶೀಲನೆ ಮಾಡಬೇಕು. ಬಾಕಿ ಉಳಿದ ಕಾಮಗಾರಿ ಮುಕ್ತಾಯ ಗೊಳಿಸಿದ ನಂತರವೆ ಗುತ್ತಿಗೆದಾರನಿಗೆ ಬಿಲ್‌ ನೀಡಬೇಕು. ತಪ್ಪಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next