Advertisement
ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿ ಯಾನ ಯೋಜನೆಯಡಿ ಉಡುಪಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಐಟಿಡಿಪಿ ಉಡುಪಿ, ಮಜೂರು ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಪಾದೂರು ವಿಶ್ವನಾಥ ಲಚ್ಚಿಲ್‌ನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ – ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ, ಸಂಚಾರಿ ವೈದ್ಯಕೀಯ ಘಟಕ ವಾಹನ ಲೋಕಾರ್ಪಣೆ ಹಾಗೂ ಆಯುಷ್ಮಾನ್ ಕಾರ್ಡುಗಳನ್ನು ವಿತರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಮ್ಮ ನೆಲದ ಮಣ್ಣಿನ ಮೂಲ ನಿವಾಸಿಗಳಾದ ಕೊರಗ ಜನಾಂಗದ ಸಂಖ್ಯೆ ಕ್ಷೀಣಿಸುತ್ತಿದೆ. ಅವರ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವ, ಕಾಳಜಿ ವಹಿಸುವ ಅಗತ್ಯವಿದೆ. ಸಮಾಜದ ಜನರಿಗೆ ಅಗತ್ಯವಿರುವ ಮೂಲ ಸೌಕರ್ಯ, ಸರಕಾರದ ಸವಲತ್ತುಗಳನ್ನು ರಾಜಕೀಯ ಮರೆತು ಅವರಿಗೆ ಒದಗಿಸಬೇಕಿದೆ. ಅಧಿಕಾರಿಗಳು ಕೂಡ ಸಮುದಾಯದ ಜನರ ಬೇಡಿಕೆಗಳಿಗೆ ಪೂರಕವಾಗಿ ತ್ವರಿತ ಸ್ಪಂದನೆ ನೀಡಬೇಕು ಎಂದರು.
Related Articles
Advertisement
ಉಡುಪಿ ಜಿಲ್ಲೆಯಾದ್ಯಂತ ಸಂಚಾರಿ ವೈದ್ಯಕೀಯ ಘಟಕದ ಮೂಲಕ ವಿಶೇಷ ದುರ್ಬಲ ಬುಡಕಟ್ಟು ಗುಂಪಿಗೆ ಸೇರಿದ ಕೊರಗ ಜನಾಂಗದವರು ಹೆಚ್ಚಾಗಿ ವಾಸಿಸುವ ಹಳ್ಳಿಗಳಿಗೆ ಭೇಟಿ ನೀಡಿ ಆವಶ್ಯಕ ಆರೋಗ್ಯ ಸೇವೆಗಳಾದ ಕ್ಷಯರೋಗ ತಪಾಸಣೆ, ಸಿಕಲ್ ಸೆಲ್ ಅನಿಮಿಯ ತಪಾಸಣೆ, ಡಯಾಲಿಸಿಸ್ ಸೇವೆ, ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ, ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಆರೋಗ್ಯ ಯೋಜನೆ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ ಅಡಿ ಆಯುಷ್ಮಾನ್ ಕಾರ್ಡ್ ವಿತರಣೆ, ಗರ್ಭಿಣಿಯರ ಆರೋಗ್ಯ ತಪಾಸಣೆ ಮತ್ತು ಲಸಿಕೀಕರಣ ಮುಂತಾದ ಸೇವೆಗಳನ್ನು ಒದಗಿಸಲಾಗುತ್ತದೆ.-ಡಾ| ಐ.ಪಿ. ಗಡಾದ್, ಡಿಎಚ್‌ಒ, ಉಡುಪಿ