Advertisement
ರಾಜ್ಯ ಆರೋಗ್ಯ ಇಲಾಖೆ ಹಾಗೂ ನೊವೊ ನಾರ್ಡಿಸ್ಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ನಗರದಲ್ಲಿ ಹಮ್ಮಿಕೊಂಡ “ಚೇಜಿಂಗ್ ಡಯಾಬಿಟಿಸ್ ಬಾರೋಮೀಟರ್’ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಿ ಮಾತನಾಡಿದರು.
Related Articles
Advertisement
ಗೃಹ ಆರೋಗ್ಯ ಜಾರಿ!ಗೃಹ ಆರೋಗ್ಯ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದೆ. ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆ.7ರಂದು ಸಂಜೆ ಸಭೆ ನಡೆಯಲಿದ್ದು, ಮುಂದಿನ 1 ತಿಂಗಳೊಳಗಾಗಿ ಗೃಹ ಆರೋಗ್ಯ ಯೋಜನೆ ರಾಜ್ಯಾದ್ಯಂತ ಜಾರಿಯಾಗಲಿದೆ. ಪ್ರತಿ ಮನೆಗೆ ಅಗತ್ಯವಿರುವ ಪ್ರಾಥಮಿಕ ಔಷಧಗಳನ್ನು ತಲುಪಿಸಲಾಗುತ್ತದೆ. ಇದೇ ವೇಳೆ ಡಯಾಬಿಟಿಸ್, ಕ್ಯಾನ್ಸರ್ ಸ್ಕ್ರೀನಿಂಗ್ ಸಹ ಮಾಡಲಾಗುತ್ತದೆ ಎಂದರು. ಡೆಂಗ್ಯೂ ಎಚ್ಚರ ಅಗತ್ಯ
ಮುಂದಿನ 3 ತಿಂಗಳು ಡೆಂಗ್ಯೂ ಕುರಿತು ಎಚ್ಚರಿಕೆಯಿಂದ ಇರಬೇಕು. ಪ್ರಸ್ತುತ ಸೋಂಕಿನ ಸಂಖ್ಯೆ ಕಡಿಮೆಯಾಗಿದೆ.ಆದರೆ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಡೆಂಗ್ಯೂ ಪ್ರಕರಣ ಇನ್ನಷ್ಟು ಏರಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿಡೆಂಗ್ಯೂ ಸೊಳ್ಳೆಗಳ ಲಾರ್ವಾ ನಾಶ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ನಿರಂತರವಾಗಿ ನಡೆಯಲಿದೆ. ಜನರು ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲುಗಡೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ರಾಜ್ಯಾದ್ಯಂತ ಸಾಂಕ್ರಾಮಿಕ ರೋಗಗಳ ತಡೆ, ಲಸಿಕಾಕರಣ ಕಾರ್ಯಕ್ರಮಗಳು ಯಶಸ್ವಿಯಾಗಿಸಲು ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹೆಲ್ತ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಇತರೆ ಸಿಬ್ಬಂದಿಯನ್ನು ನೇಮಕ ಮಾಡಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆರೋಗ್ಯ ಇಲಾಖೆಗೆ ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.