Advertisement

ಆರೋಗ್ಯ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

07:57 PM Sep 24, 2020 | Suhan S |

ಸಾಗರ: ವಿವಿಧ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ವತಿಯಿಂದ ಸೆ. 24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಈ ಸಂಬಂಧ ಸಂಘದ ವತಿಯಿಂದ ಉಪ ವಿಭಾಗಾಧಿ ಕಾರಿಗಳಿಗೆ, ಡಿವೈಎಸ್‌ಪಿ ಕಚೇರಿಗೆ ಹಾಗೂ ಉಪ ವಿಭಾಗೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪ್ರಕಾಶ್‌ ಬೋಸ್ಲೆ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿ ಹಲವು ವರ್ಷಗಳಿಂದಬೇಡಿಕೆ ಈಡೇರಿಕೆಗಾಗಿ ಮನವಿ ಸಲ್ಲಿಸಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಕಳೆದ ಮೂರು ತಿಂಗಳ ಹಿಂದೆ ಸರ್ಕಾರಕ್ಕೆ ಬೇಡಿಕೆ ಈಡೇರಿಕೆಗಾಗಿ ಅಂತಿಮ ಮನವಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರಕ್ಕೆ ನಮ್ಮ ಬೇಡಿಕೆ ಬಗೆಹರಿಸುವ ಮನಸ್ಸು ಇದ್ದಂತೆ ಕಾಣುತ್ತಿಲ್ಲ ಎಂದು ತಿಳಿಸಲಾಗಿದೆ. ಸೆ. 22ರಿಂದ ಎಲ್ಲ ರಾಷ್ಟ್ರೀಯಕಾರ್ಯಕ್ರಮಗಳು, ಕೋವಿಡ್‌-19 ಮತ್ತು ಆರ್ಥಿಕ ಹಾಗೂ ಬೌದ್ಧಿಕ ವರದಿಗಳನ್ನು ಸಲ್ಲಿಸದೆ ಸಾಂಕೇತಿಕವಾಗಿ ಧರಣಿ ಪ್ರತಿಭಟನೆ ನಡೆಸಲಾಗುತ್ತದೆ. ಒಂದೊಮ್ಮೆ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸದೆ ಹೋದಲ್ಲಿ 24ರಿಂದ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ.

ಕೋವಿಡ್‌-19 ಸಂದರ್ಭದಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಆದರೆ ನೌಕರರನ್ನು ನಿರ್ಲಕ್ಷé ಮಾಡುತ್ತಿರುವ ಸರ್ಕಾರದ ಕ್ರಮ ಖಂಡನೀಯ ಎಂದು ಹೇಳಲಾಗಿದೆ.

ಸಂಘದ ಅಧ್ಯಕ್ಷ ವಿನೋದ್‌ ಕುಮಾರ್‌, ಕಾರ್ಯದರ್ಶಿ ತೌಫಿಕ್‌, ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಮ. ಸ.ನಂಜುಂಡಸ್ವಾಮಿ, ತಾಲೂಕು ಅಧ್ಯಕ್ಷ ವೈ. ಮೋಹನ್‌, ಪ್ರಮುಖರಾದ ಕುಮಾರ್‌, ಅವಿನಾಶ್‌, ಬಾಲರಾಜ್‌ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next