Advertisement

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

04:24 AM Sep 19, 2024 | Team Udayavani |

ಮಂಗಳೂರು: ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಗನ ಕಾಯಿಲೆ ಭೀತಿ ಉಂಟಾಗಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೀ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Advertisement

ಆಫ್ರಿಕನ್‌ ದೇಶಗಳಲ್ಲೂ ಮಂಗನ ಕಾಯಿಲೆ ಹರಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಪ್ರತ್ಯೇಕ ಆ್ಯಂಬುಲೆನ್ಸ್‌ ಸನ್ನದ್ಧವಾಗಿದೆ. ಮಂಗನ ಕಾಯಿಲೆ ಪೀಡಿತ ರೋಗಿಗಳ ಚಿಕಿತ್ಸೆಗೆಂದು ವೆನ್ಲಾಕ್‌ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ ಅನ್ನು ಕಾದಿರಿಸಲಾಗಿದೆ.

ವಿಶೇಷ ಸಭೆ
“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಮಂಗನ ಕಾಯಿಲೆಯ ಯಾವುದೇ ಆತಂಕ ಇಲ್ಲ. ರಾಜ್ಯ ಸರಕಾರದಿಂದಲೂ ಸದ್ಯಕ್ಕೆ ಯಾವುದೇ ಸೂಚನೆ ಬಂದಿಲ್ಲ. ವಿಮಾನ ನಿಲ್ದಾಣ, ಬಂದರಿನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಗೆಂದು ವೆನ್ಲಾಕ್‌ನಲ್ಲಿ ಆರು ಬೆಡ್‌ಗಳನ್ನು ಮೀಸಲಿಟ್ಟಿದ್ದೇವೆ. ಸದ್ಯದಲ್ಲೇ ವಿಶೇಷ ಸಭೆ ನಡೆಸಲಾಗುತ್ತದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.

ವೈರಲ್‌ ಜ್ವರ ಹೆಚ್ಚಳ
ಕೆಲವು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ವೈರಲ್‌ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಕೆಮ್ಮು, ಶೀತ, ಗಂಟಲು ನೋವು ಸಹಿತ ಜ್ವರದ ಲಕ್ಷಣ ಜಿಲ್ಲೆಯ ಅಲ್ಲಲ್ಲಿ ಕಂಡು ಬರುತ್ತಿದೆ. ಚಿಕಿತ್ಸೆಗೆಂದು ವೈದ್ಯರ ಬಳಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲೂ ಮಕ್ಕಳಿಗೆ ಹೆಚ್ಚಾಗಿ ಜ್ವರ ಕಾಣಿಸಿಕೊಳ್ಳುತ್ತಿದೆ. ನಗರದಲ್ಲಿ ಕೆಲವು ದಿನಗಳಿಂದ ಬಿಸಿಲಿನ ವಾತಾವರಣ ಇದೆ. ರಾತ್ರಿ ವೇಳೆ ಕೆಲವು ಕಡೆ ಮಳೆ ಯಾಗುತ್ತಿದೆ. ಈ ನಿಟ್ಟಿನಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳುವ ಅಗತ್ಯವಿದೆ ಎನ್ನುತ್ತಾರೆ ವೈದ್ಯರು.

Advertisement

Udayavani is now on Telegram. Click here to join our channel and stay updated with the latest news.

Next