Advertisement

ಗೋಕಾಕ; 29ರಂದು ಆರೋಗ್ಯ ಶಿಬಿರ

03:24 PM Apr 27, 2022 | Team Udayavani |

ಗೋಕಾಕ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕ್ ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಇದೆ ದಿ.29 ರಂದು ಮುಂಜಾನೆ 10 ಗಂಟೆಗೆ ಜರುಗಲಿದೆ ಎಂದು ತಾಲೂಕು ವೈದ್ಯಾಧಿಕಾರಿ ಮುತ್ತಣ್ಣ ಕೊಪ್ಪದ ಹೇಳಿದರು.

Advertisement

ಅವರು, ಮಂಗಳವಾರದಂದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಾಲೂಕ್ ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ನಡೆಯಲಿದೆ ಎಂದರು.

ಮುಂಜಾನೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಮೇಳದಲ್ಲಿ ಸುಮಾರು ಐದು ಸಾವಿರ ಜನರಿಗೆ ವಿವಿಧ ಉಚಿತ ತಪಾಸಣೆ ನಡೆಸಲಾಗುವುದು. ದಲಿತ, ಹಿಂದುಳಿದ ವರ್ಗಗಳ ಬುಡಕಟ್ಟು ಮತ್ತು ಸ್ಲಂ ನಿವಾಸಿಗಳಿಗಾಗಿ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆ, ಸಂಸದೆ ಮಂಗಲಾ ಸುರೇಶ ಅಂಗಡಿ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ವಿಧಾನ ಪರಿಷತ್‌ ಸದಸ್ಯ ಲಖನ ಜಾರಕಿಹೊಳಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ ಸೇರಿದಂತೆ ವೈದ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next