ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಮುಂದುವರಿಸುವ ಸರ್ಕಾರದ ತೀರ್ಮಾನದ ಬಗ್ಗೆ ಚಿತ್ರರಂಗದ ಹಿರಿಯ ನಟರು ಪ್ರಶ್ನೆ ಮಾಡಿದ ಬೆನ್ನಲ್ಲೇ ಆರೋಗ್ಯ ಸಚಿವ ಕೆ ಸುಧಾಕರ್ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ನೆರೆಯ ಕೇರಳ ರಾಜ್ಯದಲ್ಲಿ ಪ್ರತೀ ದಿನ ಐದು ಸಾವಿರ ಕೇಸ್ ದಾಖಲಾಗುತ್ತಿದೆ. ಮನರಂಜನೆಗಿಂತ ಮುಖ್ಯ ಜನರ ಆರೋಗ್ಯ. ಮತ್ತೊಮ್ಮೆ ತಾಂತ್ರಿಕ ಸಲಹ ಸಮಿತಿ ಜೊತೆ ಸಭೆ ಮಾಡುತ್ತೇನೆ. ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಥಿಯೇಟರ್‌ಗಳಲ್ಲಿ ಶೇ.50 ಸೀಟಿಗೆ ಮಾತ್ರ ಅವಕಾಶ:ಸರ್ಕಾರದ ದ್ವಂದ್ವನೀತಿಗೆ ಸಿನಿಮಂದಿ ಸಿಡಿಮಿಡಿ
ಕೇಂದ್ರ ಸರ್ಕಾರ ಚಿತ್ರ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ನಂತರ ರಾಜ್ಯ ಕ್ರಮಕೈಗೊಳ್ಳಲು ಸೂಚಿಸಿದೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಪ್ರಕಾರ ನಾವು ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಫೆ.28 ವರೆಗೆ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬಹುದು ಎಂದು ಸಚಿವರು ಹೇಳಿದ್ದಾರೆ.
ಚಿತ್ರ ಮಂದಿರ ಎಂದರೆ ಮುಚ್ಚಿರುವ, ಎಸಿ ಇರುವ ಜಾಗ. ಇಲ್ಲಿ ಬಹಳ ಬೇಗನೆ ಸೋಂಕು ಹರಡಲಿದೆ. ರಾಜಕಾರಣದ ಸಭೆ ಸರಿ ಎಂದು ನಾವು ಹೇಳಿಲ್ಲ. ಆದರೆ ಹೊರಗಡೆ ಮಾಡುತ್ತಿದ್ದಾರೆ, ಆದರೆ ಅದೂ ಸರಿಯೆಂದು ಹೇಳುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಚಿತ್ರೋದ್ಯಮಕ್ಕೆ ಯಾಕೆ ನಿರ್ಬಂಧ? ಸರ್ಕಾರವನ್ನು ಪ್ರಶ್ನಿಸಿದ ಸ್ಯಾಂಡಲ್ ವುಡ್ ಸ್ಟಾರ್ಸ್
ನಿಯಂತ್ರಣ ಮಾಡೋದು ನಮ್ಮ ಸರ್ಕಾರದ ಜವಾಬ್ದಾರಿ. ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ಮಾಡಲು ಸಾಧ್ಯವಾಗುವುದಿಲ್ಲ. ಸಿಎಂ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಮುಂದೆ ನಿರ್ಧಾರ ಮಾಡುತ್ತೇವೆ ಎಂದು ಸುಧಾಕರ್ ಹೇಳಿದರು.