ಚಿತ್ರದುರ್ಗ: ಕೊರೊನಾಕ್ಕಿಂತ ಮೊದಲು ಜಗತ್ತು ಹಣ, ಅಧಿ ಕಾರ, ಆಸ್ತಿಯ ಜೊತೆ ಸಾಗುತ್ತಿತ್ತು. ಕೊರೊನಾ ನಂತರ ಯಾವುದೂ ಶಾಶ್ವತ ಅಲ್ಲ, ಆರೋಗ್ಯವೇ ಭಾಗ್ಯ ಎನ್ನುವ ಮಟ್ಟಕ್ಕೆ ಬಂದಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.
ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಒಪಿಡಿ ಬ್ಲಾಕ್, ಎಸ್.ಜೆ.ಎಂ ಹೆಲ್ತ್ ಪ್ರಿವಿಲೆಜ್ ಕಾರ್ಡ್ ಮತ್ತು ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಶ್ರೀಮಂತರಾಗುವುದಕ್ಕಿಂತ ಆರೋಗ್ಯ ವಂತರಾಗಬೇಕು. ಪರಿಶ್ರಮಕ್ಕೆ ಒಳಗಾದವರಿಗೆ ಯಾವ ರೋಗವೂ ಬರುವುದಿಲ್ಲ. ಅವರಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುತ್ತದೆ. ಪ್ರತಿಯೊಬ್ಬರೂ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡು ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದರು.
ಉತ್ತಮ ಮತ್ತು ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂಬ ಕನಸಿತ್ತು. ಅದರಲ್ಲಿ ಸಫಲರಾಗಿ¨ªೇವೆ. ನಮ್ಮಲ್ಲಿ ನುರಿತ ತಜ್ಞ ವೈದ್ಯರಿದ್ದಾರೆ. ಆಸ್ಪತ್ರೆಯಲ್ಲಿ ಹೃದಯರೋಗ, ತುರ್ತುಚಿಕಿತ್ಸಾ ವಿಭಾಗ, ಸಂಪೂರ್ಣ ಹೃದಯ ತಪಾಸಣೆ, 24×7 ಕ್ಯಾತ್ ಲ್ಯಾಬ್, ಸಿಸಿಯು/ಐಸಿಯು, ಔಷಧಾಲಯ, ಹೃದಯ ತುರ್ತುಚಿಕಿತ್ಸೆ, ಇಕೋ, ಟಿಎಂಟಿ ಸೌಲಭ್ಯಗಳಿವೆ. ಇಂದು ಸೂಪರ್ ಸ್ಪೆಷಾಲಿಟಿ ಒಪಿಡಿಯನ್ನೂ ತೆರೆಯಲಾಗಿದೆ.
ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆಗೆ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಲಾಗಿದೆ. ಹೆಲ್ತ್ ಪ್ರಿವಿಲೇಜ್ ಕಾರ್ಡ್ ಬಿಡುಗಡೆಗೊಳಿಸಲಾಗಿದ್ದು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ಇನ್ನು ಮುಂದೆ ತಾಲೂಕು ಮಟ್ಟದಲ್ಲಿ ಹೃದಯ ರೋಗ ಚಿಕಿತ್ಸೆ ಪಡೆಯಲು ಅನುಕೂಲಗಳಿವೆ. ಸರ್ಕಾರವೇ ಆರೋಗ್ಯ ವಿಮೆ ಭರಿಸಿದರೆ ಬಡವರಿಗೆ ಅನುಕೂಲವಾಗಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸಿರುವುದರಿಂದ ಬಡವರಿಗೆ ಅನುಕೂಲವಾಗಿದ್ದು, 1500 ಕಾಯಿಲೆಗಳಿಗೆ ಚಿಕಿತ್ಸೆ ದೊರೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ರಕ್ಷಣಾಧಿಕಾರಿ ಜಿ. ರಾಧಿಕಾ, ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ಸಿ.ಎಲ್. ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜು, ಎಸ್.ಜೆ.ಎಂ ವಿದ್ಯಾಪೀಠದ ಆಡಳಿತ ಮಂಡಳಿ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕೆಇಬಿ ಷಣ್ಮುಖಪ್ಪ, ಕಾಲೇಜಿನ ಪ್ರಾಂಶುಪಾಲ ಡಾ| ಜಿ. ಪ್ರಶಾಂತ್, ವೈದ್ಯಕೀಯ ಅ ಧೀಕ್ಷಕ ಡಾ| ಎಲ್. ಪಾಲಾಕ್ಷಯ್ಯ, ಡಾ| ಸುರೇಶ್ ಕಡ್ಲಿ, ಡಾ| ನಾರಾಯಣಮೂರ್ತಿ, ಡಾ| ನಾಗೇಂದ್ರ, ಡಾ| ರಾಜೇಶ್, ಡಾ| ಸುಜಯ್, ಡಾ| ಮಂಜುನಾಥ್, ಡಾ| ವಿವೇಕ್, ಡಾ| ಕಿರಣ್‌ಕುಮಾರ್ ಭಾಗವಹಿಸಿದ್ದರು