Advertisement

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

12:33 PM Jun 19, 2024 | Team Udayavani |

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವೈದ್ಯಕೀಯ ಇಲಾಖೆಯಿಂದ‌ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ಇದು ನನ್ನ ಗಮನಕ್ಕೆ ಬಂದಿಲ್ಲ. ಪೊಲೀಸರು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೆ. ಅತ್ಯಂತ ಅಮಾನವೀಯ ರೀತಿಯಲ್ಲಿ ಕೊಲೆ ನಡೆದಿದೆ. ಅದು ಯಾರೇ ಇದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದುಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಕೋಪದಲ್ಲಿ ಇಂತಹ ಘಟನೆಗಳು ಆಗುತ್ತವೆ, ಈ ಹಿಂದೆಯೂ ಆಗಿವೆ. ಸರ್ಕಾರಗಳು ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನೇ ಸರಿ, ನಾನು ಮಾಡಿದ್ದೇ ಸರಿ ಎನ್ನುವ ಅತಿರೇಕದ ವರ್ತನೆ ಜಾಸ್ತಿಯಾದಾಗ ಈ ರೀತಿಯ ಘಟನೆಗಳು ನಡೆಯುತ್ತವೆ. ಇಂತಹ ಘಟನೆಗಳು ಸಮಾಜಕ್ಕೆ ಒಳ್ಳೆಯದಲ್ಲ ಹೇಳಿದರು.

ರಾಜ್ಯದ ಹಲವೆಡೆ ಭ್ರೂಣಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ವಿಚಾರದಲ್ಲಿ ನಮ್ಮ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಹದ್ದಿನ ಕಣ್ಣಿಟ್ಟು ಗಮನ ಹರಿಸುತ್ತಿದ್ದಾರೆ. ಎಲ್ಲೆಲ್ಲಿ ಭ್ರೂಣ ಹತ್ಯೆ ಆಗುತ್ತಿತ್ತೋ, ಆ ಎಲ್ಲಾ ಕಡೆಯೂ ದಾಳಿ ಮಾಡಿ ಹಿಡಿದಿದ್ದೇವೆ. ನಮ್ಮ ಇಲಾಖೆಯಿಂದ ತಪ್ಪು ಮಾಡಿದವರನ್ನು ಪತ್ತೆ ಮಾಡುತ್ತೇವೆ. ಕೋರ್ಟ್ ಮೂಲಕ ಶಿಕ್ಷೆ ಆಗಬೇಕು. ಹೆರಿಗೆ ಆಸ್ಪತ್ರೆಗಳಲ್ಲಿ ಹಣ ಪಡೆಯುವುದು  ನಮ್ಮ ವ್ಯವಸ್ಥೆಯಲ್ಲಿ ಇಂದಿಗೂ ಇದು ನಡೆಯುತ್ತಿದೆ. ಎಲ್ಲವೂ ಸರಿಯಿದೆ ಎಂದು ನಾನು ಹೇಳೋದಿಲ್ಲ. ಇದನ್ನು ಕೂಡ ಗಮನ ಹರಿಸಿ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕ ವಿರೋಧವಾದ ವಿಚಾರದ ಬಗ್ಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೊಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಬೆಲೆ ಕಡಿಮೆಯಿದೆ. ಕೇಂದ್ರ ಸರ್ಕಾರ ಈ ಹಿಂದೆ ಬೊಮ್ಮಾಯಿಯವರ ಮೇಲೆ ಒತ್ತಡ ತಂದು ರಾಜ್ಯದಲ್ಲಿ ಬೆಲೆ ಇಳಿಕೆ ಮಾಡಿದ್ದರು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರಕ್ಕೆ ಹೋಲಿಸಿದರೆ ನಮ್ಮಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆಯಿದೆ. ಗ್ಯಾರೆಂಟಿ ಯೋಜನೆ ಹಾಗೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೂ ಸಂಬಂಧವಿಲ್ಲ. ಗ್ಯಾರೆಂಟಿ ಯೋಜನೆಗಳಿಗೆ ಖರ್ಚು ಮಾಡುತ್ತಿರುವ ಹಣ ಕಡಿಮೆಯಲ್ಲ. ಅದರಿಂದ ನಮ್ಮ ಬಡ ಜನರಿಗೆ ಸಹಾಯವಾಗುತ್ತಿದೆ. ಸರ್ಕಾರದಿಂದ ಒಳ್ಳೆಯ ಕಾರ್ಯಕ್ರಮ ತಂದಿದ್ದೇವೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next