Advertisement
ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Related Articles
Advertisement
ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಜಿನೋಮಿಕ್ ಸಿಕ್ವೆನ್ಸಿಂಗ್ ಲ್ಯಾಬ್ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.
ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಜತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್ ತಿಳಿಸಿದರು.