Advertisement

10 ಪ್ರಾ.ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

02:29 AM Apr 01, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಎಕ್ರೆಗಿಂತ ಅಧಿಕ ಭೂಮಿ ಹೊಂದಿರುವ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಹಾಗೂ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನರೇಗಾ ಯೋಜನೆಯಡಿ ಆರೋಗ್ಯ ಸಂಬಂಧಿತ ಕೈತೋಟ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 66 ಪ್ರಾ.ಆ. ಕೇಂದ್ರಗಳ ಪೈಕಿ ಬಾಕಿ ಉಳಿದಿರುವ 35 ಕೇಂದ್ರಗಳಿಗೆ ನರೇಗಾ ಯೋಜನೆಯಡಿ ಆವರಣ ಗೋಡೆ ನಿರ್ಮಿಸ ಬೇಕು. ಆಯುಷ್‌ ಸೇರಿದಂತೆ ಇತರರ ನೆರವಿನಿಂದ ಎಲ್ಲ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಔಷಧೀಯ ಸಸ್ಯಗಳ ಕೈತೋಟವನ್ನು ಮುಂದಿನ 90 ದಿನದೊಳಗೆ ನಿರ್ಮಿಸಬೇಕು. ಅಲ್ಲಿ ಕುಡಿ ಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿ ಮಾಡಿರಬೇಕು ಎಂದರು.

ಪ್ರತೀ ಬುಧವಾರ ಆರೋಗ್ಯಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಕನಿಷ್ಠ ಅರ್ಧ ದಿನ ಒಂದು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.

ಆಯುಷ್ಮಾನ್‌ ಕಾರ್ಡ್‌ ವಿತರಣೆಯು ಜಿಲ್ಲೆ ಯಲ್ಲಿ ಕುಂಠಿತವಾಗಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಒಂದು ಕುಟುಂಬಕ್ಕೆ 5 ಲಕ್ಷ ರೂ. ಪ್ರಯೋಜನ ಸಿಗುವ ಈ ಕಾರ್ಡ್‌ ಮಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು.

Advertisement

ಖಾಲಿ ಹುದ್ದೆಗಳ ಭರ್ತಿಗೆ ಮನವಿ :

ಜಿಲ್ಲೆಯ ಆರೋಗ್ಯ ಇಲಾಖೆ, ವೆನ್ಲಾಕ್‌, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ವಿಭಾಗದಲ್ಲಿ ವೈದ್ಯರು, ಅಧಿಕಾರಿಗಳು, ತಜ್ಞರ ಹುದ್ದೆ ಖಾಲಿ ಇದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಿಯವರಿಗೆ ಸಚಿವರು ಸೂಚಿಸಿದರು.

ಡಿಎಚ್‌ನಿವೃತ್ತಿ :

ಬುಧವಾರ ನಿವೃತ್ತರಾದ ಡಿಎಚ್‌ಒ ಡಾ| ರಾಮಚಂದ್ರ ಬಾಯರಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಂಸದ ನಳಿನ್‌ ಕುಮಾರ್‌ ಕಟೀಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್‌ ನಾೖಕ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್‌ ಪ್ರೇಮಾನಂದ ಶೆಟ್ಟಿ, ಉಪಮೇಯರ್‌ ಸುಮಂಗಲಾ ರಾವ್‌, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ. ಪಂ. ಸಿಇಒ ಡಾ| ಕುಮಾರ್‌, ಎಸ್‌ಪಿ ಲಕ್ಷ್ಮೀಪ್ರಸಾದ್‌, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಡಿಸಿಪಿ ಹರಿರಾಂ ಶಂಕರ್‌ ಉಪಸ್ಥಿತರಿದ್ದರು.

ಲಸಿಕೆ: ಆರೋಗ್ಯ ಕಾರ್ಯಕರ್ತರ  ನಿರಾಸಕ್ತಿಗೆ ಸಚಿವರ ಅಸಮಾಧಾನ :

ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು ಶೇ. 80.95ರಷ್ಟು ಮೊದಲ ಡೋಸ್‌ ಹಾಗೂ ಶೇ. 61.62ರಷ್ಟು ಮಂದಿ 2ನೇ ಡೋಸ್‌  ತೆಗೆದು ಕೊಂಡಿದ್ದಾರೆ. ಮುಂಚೂಣಿ ಕಾರ್ಯಕರ್ತರ ಪೈಕಿ ಮೊದಲ ಡೋಸ್‌ ಶೇ. 92.77 ಹಾಗೂ 2ನೇ ಡೋಸ್‌ ಶೇ. 49.27 ಮಂದಿ ಪಡೆದಿದ್ದಾರೆ ಎಂಬ ಡಿಎಚ್‌ಒ ಮಾತಿಗೆ ಅಸಮಾಧಾನ ವ್ಯಕ್ತ ಪಡಿಸಿದ ಸಚಿವರು, ಮುಂಚೂಣಿಯಲ್ಲಿರ ಬೇಕಾದ ಆರೋಗ್ಯ ಕಾರ್ಯಕರ್ತರು ನಿರ್ಲಕ್ಷé  ತೋರುವುದು ಸರಿಯಲ್ಲ. 2ನೇ ಡೋಸ್‌ ಪಡೆದ ವರ ಸಂಖ್ಯೆ ತೀರಾ ಕಡಿಮೆ ಇರುವುದು ಜಿಲ್ಲೆಯ ಪಾಲಿಗೆ ಆಶ್ಚರ್ಯ ತರಿಸುತ್ತಿದೆ. ತತ್‌ಕ್ಷಣವೇ  ಎಲ್ಲರೂ ಲಸಿಕೆ ಪಡೆದುಕೊಳ್ಳುವ ವ್ಯವಸ್ಥೆಯನ್ನು ಇಲಾಖೆ ಮಾಡಬೇಕು. ಲಸಿಕೆ ಹಾಕಲು ಕರೆತರು ವವರು ಚಿತ್ರವನ್ನು ವೆಬ್‌ಸೈಟ್‌/ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಇತರರಿಗೆ ಪ್ರೇರಣೆ ನೀಡಬೇಕು ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next