Advertisement

ಆರೋಗ್ಯ ಕೇಂದ್ರದ ವೈದ್ಯರು ಮಧ್ಯಾಹ್ನ 2ಗಂಟೆಗೆ ಗೈರು: ಸಚಿವರು ಗರಂ

01:13 PM Sep 03, 2020 | sudhir |

ಶಿಡ್ಲಘಟ್ಟ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಧ್ಯಾಹ್ನದ 2 ಗಂಟೆಗೆ ಹೊರಟು ಹೋಗುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ ಎಂದ ಸಚಿವ ಡಾ.ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಚಿಕ್ಕಬಳ್ಳಾಪುರ ನಗರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಈ ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೂಕ್ತ ರೀತಿಯ ಕ್ರಮ ಜರುಗಿಸಬೇಕೆಂದು ಸಭೆಯಲ್ಲಿದ್ದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆಯಲ್ಲಿ ಆಸ್ಪತ್ರೆಗಳಲ್ಲಿ ಸ್ವತ್ಛತೆ ಮರಿಚೀಕೆಯಾಗಿದೆ ಎಂದು ಜಿಪಂ ಸದಸ್ಯರು ಸಚಿವರ ಗಮನಸೆಳೆದಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಚಿವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ವತ್ಛವಾಗಿಟ್ಟುಕೊಳ್ಳುವ ಜೊತೆಗೆ ಆರೋಗ್ಯ ಕೇಂದ್ರದ ಸಮೀಪ ನರೇಗಾ ಯೋಜನೆ ಮೂಲಕ ಉದ್ಯಾನ ನಿರ್ಮಿಸಿ ಸಾರ್ವಜನಿಕರನ್ನು ಆಕರ್ಷಿಸಬೇಕು ಎಂದು ಹೇಳಿದರು. ಅಲ್ಲದೆ, ಆಸ್ಪತ್ರೆಗಳಲ್ಲಿ ಖಾಲಿಯಿರುವ ಕೆಲವೊಂದು ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ವೇಳೆ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆತ್ಮಕ್ಕೆ ಶಾಂತಿಸಿಗಲೆಂದು ಸಭೆಯ ಪ್ರಾರಂಭದ ಮುನ್ನಾ 5 ನಿಮಿಷ ಮೌನಾಚಾರಣೆ ಮಾಡಲಾಯಿತು. ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕ ನರ ಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ತಾಪಂ ಅಧ್ಯಕ್ಷ ರಾಮಸ್ವಾಮಿ, ಜಿಲ್ಲಾಧಿಕಾರಿ ಆರ್‌.ಲತಾ, ಸಿಇಒ ಬಿ.ಫೌಜಿಯಾ ತರನ್ನುಮ್‌, ಎಸ್ಪಿ ಮಿಥುನ್‌ ಕುಮಾರ್‌, ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ. ರಾಜಾಕಾಂತ್‌, ಸದಸ್ಯ ಕೆ.ಎಂ.ಮುನೇಗೌಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next