Advertisement

ಬೇಡಿಕೆ ಈಡೇರಿಕೆಗೆ ಆರೋಗ್ಯ ಸಚಿವರ ಭರವಸೆ

09:49 AM Oct 25, 2019 | Team Udayavani |

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ , ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆಯನ್ನು ಆರೋಗ್ಯ ಸಚಿವ ಶ್ರೀರಾಮುಲು ಅವರು ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷ ವಿಶ್ವರಾಧ್ಯ ಎಚ್‌.ಯಮೋಜಿ ಹೇಳಿದ್ದಾರೆ.

Advertisement

ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾನ ವೇತನ, ಸೇವಾ ಭದ್ರತೆ ಮತ್ತು ಕೆಲಸ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವೇಳೆ ಸಭೆಯಲ್ಲಿ ಹಾಜರಿದ್ದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸಮಸ್ಯೆಗಳನ್ನು ಬಗೆಹರಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next