Advertisement
ಕಳೆದ ಐದಾರು ದಿನಗಳ ಹಿಂದೆ ವಿಪರೀತ ಜ್ವರ, ಮೈ ಕೈ ನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ತೋರಿಸಿದಾಗ ಸೋಡಿಯಂ ಪ್ರಮಾಣ ಕಡಿಮೆ ಆಗಿರಬಹುದು ಎಂದು ಅಂದಾಜಿಸಲಾಗಿತ್ತು. ರಕ್ತದ ಮಾದರಿ ಪರೀಕ್ಷೆ ಮಾಡಿದಾಗ ವೈರಾಣು ಜ್ವರ ಇರಬಹುದೆಂದು ನಿರೀಕ್ಷಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಮೂರ್ನಾಲ್ಕು ದಿನಗಳಾಗಿದ್ದರೂ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಯಾವುದೇ ಸೋಂಕು ತಗುಲದಂತೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇಟ್ಟು ಚಿಕಿತ್ಸೆ ಕೊಡಲಾಯಿತು. ಐದಾರು ದಿನಗಳ ಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಅವರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಡಿ. ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ. ಸದ್ಯಕ್ಕೆ ಕನಿಷ್ಠ 3 ವಾರಗಳ ವಿಶ್ರಾಂತಿಯಲ್ಲಿದ್ದೇನೆ. ಆರೋಗ್ಯ ಸುಧಾರಣೆಗಾಗಿ ನನ್ನ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಷಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ. ನನ್ನ ಆರೋಗ್ಯ ಸುಧಾರಣೆಗಾಗಿ ಹಾರೈಸಿದ ಗೆಳೆಯರಿಗೆ, ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
Related Articles
Advertisement