Advertisement
ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಪತ್ರಕರ್ತರ ಜತೆ ಮಾತನಾಡಿದ ಅವರು, ರಕ್ತದೊತ್ತಡ, ಮಧು ಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ರಮೇಣ ಇದು ಬೇರೆ ಕಾಯಿಲೆಗಳಿಗೂ ದಾರಿ ಮಾಡುತ್ತದೆ. ಗೃಹ ಆರೋಗ್ಯ ಯೋಜನೆ ಯಡಿ ಕೋಲಾರದಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಇದರಿಂದ ಸಮಸ್ಯೆಗಳನ್ನು ಆರಂಭದಲ್ಲೇ ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಚಿವೆ ವಿರುದ್ಧದ ಅಶ್ಲೀಲ ಪದ ಪ್ರಯೋಗವನ್ನು ಬಿಜೆಪಿ ಸಮರ್ಥಿಸುತ್ತಿರುವುದು ಖಂಡನೀಯ ಎಂದು ಹೇಳಿದ ಸಚಿವರು, ಇದು ಕಟ್ಟುಕಥೆ ಎನ್ನುವ ವಿಪಕ್ಷಗಳ ಹೇಳಿಕೆ ಸುಳ್ಳಿನಿಂದ ಕೂಡಿದೆ. ಇದು ಹಲವು ಜನಪ್ರತಿನಿಧಿಗಳ ಮುಂದೆಯೇ ನಡೆದ ಘಟನೆ. ಇದನ್ನು ಸಹಿಸಲಾಗದು. ಇದರ ವಿರುದ್ಧ ಕಾನೂನು ಕ್ರಮ ಆಗಲೇಬೇಕು. ಧರ್ಮ, ಹೆಣ್ಣಿನ ಬಗ್ಗೆ ಭಾಷಣ ಮಾಡುವ ಬಿಜೆಪಿ ಮತ್ತು ಸಂಘ ಪರಿವಾರವು ಸಿ.ಟಿ. ರವಿ ಹೇಳಿಕೆ ಬಗ್ಗೆ ಮೌನವಾಗಿರುವುದಕ್ಕೆ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.