ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಬರ್ತ್ ಡೇ ಆಚರಿಸಿಕೊಂಡ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ತಂಡದೊಂದಿಗೆ ಮೂರನೇ ಏಕದಿನ ಪಂದ್ಯಕ್ಕಾಗಿ ತಿರುವನಂತಪುರಂಗೆ ಪ್ರಯಾಣಿಸಿಲ್ಲ. ಬದಲಾಗಿ ಬೆಂಗಳೂರಿಗೆ ಬಂದಿದ್ದಾರೆ.
ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ನಾಲ್ಕು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಈಗಾಗಲೇ ವಶಪಡಿಸಿಕೊಂಡಿದೆ.
ಇದನ್ನೂ ಓದಿ:ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ ಮೂರು ಚಿತ್ರಗಳು
ಈಡನ್ ಗಾರ್ಡನ್ಸ್ ಪಂದ್ಯದ ಮೊದಲು ದ್ರಾವಿಡ್ ಅವರಿಗೆ ಅನಾರೋಗ್ಯದಿಂದ ಬಳಲಿದರು. ಟೀಮ್ ಹೋಟೆಲ್‌ನಲ್ಲಿ ರಾಹುಲ್ ದ್ರಾವಿಡ್ ಅಸ್ವಸ್ಥರಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ತಕ್ಷಣವೇ ಅವರಿಗೆ ಚಿಕಿತ್ಸೆ ನೀಡಲಾಯಿತು.
ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ದ್ರಾವಿಡ್ ಅವರ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದಿದ್ದು, ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಏರ್ಪಡಿಸಿದ್ದ ವೈದ್ಯರು ಔಷಧಿಯನ್ನು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದ್ರಾವಿಡ್ ಇದೀಗ ಹೆಚ್ಚಿನ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ತೆರಳಲಿದ್ದು, ವೈದ್ಯರು ಅನುಮತಿ ನೀಡಿದರೆ, ಭಾನುವಾರ (ಜನವರಿ 15) ತಿರುವನಂತಪುರದಲ್ಲಿ ಮೂರನೇ ಏಕದಿನ ಪಂದ್ಯಕ್ಕಾಗಿ ತಂಡವನ್ನು ಸೇರಿಕೊಳ್ಳಬಹುದು.