Advertisement
ಜೂನ್-ಜುಲೈ ಬಿಲ್ ಪಾವತಿಯಲ್ಲಿ ಮಾತ್ರ ವಿಳಂಬವಾಗಿದೆ. ಉಳಿದ ಸಂಸ್ಥೆಗಳ ಬಿಲ್ ಪಾವತಿಯಲ್ಲಿ ಯಾವುದೇ ಬಾಕಿ ಇಲ್ಲ. ಈ ಸಂಸ್ಥೆಯಿಂದ ಆಗಿರುವ ಸಿಟಿ ಸ್ಕ್ಯಾನಿಂಗ್ ಮತ್ತು ಎಂಆರ್‌ಐ ಸೇವೆಗಳ ವ್ಯತ್ಯಯವನ್ನು ಸರಿಪಡಿಸಲು ಬದಲಿ ಕ್ರಮವನ್ನೂ ಈಗಾಗಲೇ ಕೈಗೊಳ್ಳಲಾಗಿದೆ. ಪೂರಕ ಮಾಹಿತಿಯನ್ನು ಒದಗಿಸಿದ ತತ್‌ಕ್ಷಣವೇ ಬಾಕಿ ಬಿಲ್ ಪಾವತಿ ಮಾಡಲಾಗುತ್ತದೆ. ಸೇವೆಯಲ್ಲಿ ವ್ಯತ್ಯಯ ಕಂಡು ಬಂದಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯ ವಿರುದ್ಧ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿನ ಸಿಟಿ ಸ್ಕ್ಯಾನಿಂಗ್ ಹಾಗೂ ಎಂಆರ್‌ಐ ಸೇವೆ ಸ್ಥಗಿತಗೊಂಡಿವೆ ಎನ್ನುವ ಕುರಿತು ಸೆ. 25ರಂದು ಉದಯವಾಣಿಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ತತ್‌ಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.