Advertisement

ಕೋವಿಡ್‌ ಪರೀಕ್ಷೆಗಾಗಿ ಆರೋಗ್ಯ ಸಿಬ್ಬಂದಿ ಪ್ರತಿಭಟನೆ

09:31 AM Jul 04, 2020 | Suhan S |

ಹೊಸಪೇಟೆ: ಕೋವಿಡ್ ಭೀತಿಯ ನಡುವೆಯೂ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗೆ ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ನಗರದ ಸರಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆ ಸಿಬ್ಬಂದಿ ಶುಕ್ರವಾರ ದಿಢೀರ್‌ ಪ್ರತಿಭಟನೆ ನಡೆಸಿದರು.

Advertisement

ಸರಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆಗೊಂಡ ಆರೋಗ್ಯ ಸಿಬ್ಬಂದಿ ಕೂಡಲೇ ನಮಗೆ ಕೋವಿಡ್‌ ಪರೀಕ್ಷೆಗೆ ಒಳಪಡಿಸಿ ಎಂದು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಕೊರೊನಾ ವಾರಿಯರ್ಸ್‌ಗೆ ಕೋವಿಡ್‌ ಪರೀಕ್ಷೆ ಇಲ್ಲದಿದ್ದರೇ ಹೇಗೆ? ನಮ್ಮನ್ನು ನೆಚ್ಚಿಕೊಂಡು ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಕೋವಿಡ್‌ ಪಾಸಿಟಿವ್‌ ವ್ಯಕ್ತಿ ಆಸ್ಪತ್ರೆಯಲ್ಲಿ ತಿರುಗಾಡುತ್ತಿದ್ದಾನೆ. ಸಾಮಾನ್ಯ ಮತ್ತು ಕೋವಿಡ್ ರೋಗಿಗಳು ಒಂದೆ ಕಡೆ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದರಿಂದ ರೋಗ ಹರಡುವಿಕೆ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲ ಹಾಗೂ ಕನಿಷ್ಟ ಪಿಪಿಇ ಕಿಟ್‌ಗಳನ್ನು ಕೂಡ ನೀಡಿಲ್ಲ. ಈಗಾಗಲೇ ಓರ್ವ ವೈದ್ಯ ಮತ್ತು ನರ್ಸ್‌ ಕರೊನಾ ಪಾಸಿಟಿವ್‌ ಬಂದಿರುವುದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಲ್ಲ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಿ ಎಂದು ಕಣ್ಣೀರಿಟ್ಟ ಪ್ರಸಂಗ ನಡೆಯಿತು. ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಲಿ ಎಂದು ಪಟ್ಟು ಹಿಡಿದರು.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಎಚ್‌. ವಿಶ್ವನಾಥ ಉಪವಿಭಾಗಾಧಿ ಕಾರಿಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಸಮಾಧಾನಗೊಂಡು ಪ್ರತಿಭಟನೆಯಿಂದ ಹಿಂದೆ ಸರಿದರು.  ಆಸ್ಪತ್ರೆ ವೈದ್ಯಾಧಿಕಾರಿ ಡಾ| ಸಲೀಮ್‌, ತಾಲೂಕು ಆರೋಗ್ಯಾಧಿ ಕಾರಿ ಡಿ. ಭಾಸ್ಕರ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next