Advertisement

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

07:46 PM May 24, 2022 | Team Udayavani |

ಮಂಡ್ಯ: ರಾಜ್ಯದಲ್ಲಿಯೇ ಐದು ರೂ. ಡಾಕ್ಟರ್ ಎಂದೇ ಖ್ಯಾತಿ ಗಳಿಸಿರುವ ಚರ್ಮ ಹಾಗೂ ಲೈಂಗಿಕ ತಜ್ಞ ಡಾ.ಎಸ್.ಸಿ.ಶಂಕರೇಗೌಡ ಅವರಿಗೆ ಸೋಮವಾರ ಸಂಜೆ ಹೃದಯಾಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿರುವುದರಿಂದ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಒಂದು ವಾರದ ನಂತರ ಬೈಪಾಸ್ ಸರ್ಜರಿ ಮಾಡಬೇಕಾಗಿದ್ದು, ವಿಶ್ರಾಂತಿ ಅಗತ್ಯವಾಗಿದೆ. ಯಾವುದೇ ತೊಂದರೆ ಇಲ್ಲದೆ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಳ್ಳು ಸುದ್ದಿ ಹಬ್ಬಿಸಬೇಡಿ:

ವೈದ್ಯ ಡಾ.ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಕೆಲವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರ ಹಾಕಿ ಪೋಸ್ಟ್ ಮಾಡಿದ್ದರು. ಇದರಿಂದ ಜಿಲ್ಲೆಯ ಜನರಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು.

ನಂತರ ಡಾ.ಶಂಕರೇಗೌಡ ಪತ್ನಿ ರುಕ್ಮಿಣಿ, ಉದಯವಾಣಿಗೆ ಪ್ರತಿಕ್ರಿಯಿಸಿ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮಧ್ಯಾಹ್ನ ನಾನೇ ಊಟ ಮಾಡಿಸಿದ್ದೇನೆ. ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next