ನವದೆಹಲಿ : ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ ಬರ್ಗ್ ಕಳವಳ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತದಲ್ಲಿ ದಿನನಿತ್ಯ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಿದ್ದು, ಎಲ್ಲರನ್ನೂ ಬೆಚ್ಚಿಬೀಳಿಸುವ ಹಂತಕ್ಕೆ ತಲುಪಿದೆ. ಹೀಗಾಗಿ ಕೋವಿಡ್ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವಮಟ್ಟದಲ್ಲಿ ಬೆಂಬಲ ಸಿಗಬೇಕು ಎಂದು ಗ್ರೆಟಾ ಥನ್ಬರ್ಗ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಸದ್ಯ ಭಾರತದಲ್ಲಿ ಕೋವಿಡ್ ಸೋಂಕಿನ ಸ್ಪೋಟವಾಗುತ್ತಿದೆ. ದಿನವೊಂದಕ್ಕೆ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪರಿಸ್ಥಿತಿಗೆ ಸದ್ಯ ಎಲ್ಲರೂ ಮರುಗುತ್ತಿದ್ದಾರೆ. ಅಮೆರಿಕಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ರಾಷ್ಟ್ರಗಳು ಭಾರತ ಆದಷ್ಟು ಬೇಗ ಕೋವಿಡ್ ಸೋಂಕಿನಿಂದ ಮುಕ್ತಿ ಪಡೆಯಲಿ ಅಂತ ಹರಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಯುವ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಸೇರಿದ್ದು, ಭಾರತದಲ್ಲಿ ದಿನೇ ದಿನೇ ಸೋಂಕಿನ ಸಂಖ್ಯೆ ಅಧಿಕಾವಾಗ್ತಾ ಇದೆ. ಇದು ಎಂಥವರನ್ನೂ ಬೆಚ್ಚಿ ಬೀಳಿಸುತ್ತಿದೆ. ಸೋಂಕು ನಿವಾರಿಸಲು ಭಾರತಕ್ಕೆ ವಿಶ್ವ ಮಟ್ಟದ ಬೆಂಬಲ ಸಿಗಬೇಕು ಅಂತ ಟ್ವೀಟ್ ಮಾಡಿದ್ದಾರೆ.