ಅಹ್ಮದಾಬಾದ್: ಜಗತ್ತಿನಲ್ಲಿ ಉಂಟಾಗುತ್ತಿರುವ ತಾಪಮಾನ ಬದಲಾವಣೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಹೆಚ್ಚುವರಿ ಸವಾಲು ಒಡ್ಡಲಿದೆ. ಹೀಗೆಂದು ಅಮೆರಿಕದ ವಿದೇಶಾಂಗ ಖಾತೆ ಮಾಜಿ ಸಚಿವೆ ಹಿಲರಿ ಕ್ಲಿಂಟನ್ ಹೇಳಿದ್ದಾರೆ.
ಅಹ್ಮದಾಬಾದ್‌ನಲ್ಲಿ ರವಿವಾರ ಆಯೋಜಿಸಲಾಗಿದ್ದ ಸೆಲ್ಫ್ ಎಂಪ್ಲಾಯ್ಡ ವುಮನ್ಸ್ ಅಸೋಸಿಯೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸಲು ಜಗತ್ತಿನಲ್ಲಿಯೇ ಮೊದಲ ಬಾರಿಗೆ ನಿಧಿ ಸ್ಥಾಪನೆ ಆಗುತ್ತಿರುವುದು ಶ್ಲಾಘನೀಯ ಎಂದರು. ಅಸಾಂಪ್ರದಾಯಿಕ ಕ್ಷೇತ್ರದಲ್ಲಿ ದುಡಿಯುವ ಮಹಿಳೆಯರ ಸಂರಕ್ಷಣೆಯೇ ಮುಂದಿನ ದಿನಗಳಲ್ಲಿ ಸಂಸ್ಥೆಗೆ ಪ್ರಧಾನವಾಗಲಿದೆ ಎಂದರು.