Advertisement
ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಬೇಗೆಯ ವಾತಾವರಣ ಉಂಟಾಗಿದ್ದು ಗಾಳಿಯಲ್ಲೂ ನೀರಿನ ತೇವಾಂಶವಿಲ್ಲದೆ ಕೆಲವೆಡೆ ಬಿಸಿ ಗಾಳಿ ಬೀಸಲಾರಂಭಿಸಿವೆ. ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 32 ಡಿ.ಸೆ. ದಾಖಲಾಗಿದ್ದು ಇದು ವಾಡಿಕೆಗಿಂತ 3.2 ಡಿ.ಸೆ. ಹೆಚ್ಚಿನ ತಾಪಮಾನವಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಾಡಿಕೆಗಿಂತ 3.1 ಡಿ.ಸೆ. ಹೆಚ್ಚಿನ ತಾಪಮಾನ ಉಂಟಾಗಿದೆ.
ನೀರಿನ ಕೊರತೆಯಿಂದ ಭೂಮಿಯಲ್ಲಿ ತೇವಾಂಶದ ಪ್ರಮಾಣ ಕಡಿಮೆಯಾಗಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಉಂಟಾಗಿದೆ. ಮಳೆಯಾದರೆ ತಾಪಮಾನ ಕೊಂಚ ಇಳಿಕೆಯಾಗಲಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಪಮಾನವು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಹವಾಮಾನ ತಜ್ಞರು. ಟ್ರಫ್ ಹಿನ್ನೆಲೆಯಲ್ಲಿ ಹಗುರ ಮಳೆ
ಕರ್ನಾಟಕ ಒಳನಾಡಿನಲ್ಲಿ ಟ್ರಫ್ 0.9 ಕಿ.ಮೀ ಎತ್ತರದಲ್ಲಿ ಟ್ರಫ್ಯಿದ್ದು ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 7ರ ವರಗೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆ. ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿ.ಸೆ. ವರೆಗೆ ಏರಿಕೆಯಾಗುವ ಸಾಧ್ಯತೆಗಳಿವೆ.
Related Articles
Advertisement