ನವದೆಹಲಿ: ಭಾರತದಲ್ಲಿನ ಕನಿಷ್ಠ ಐದು ರಾಜ್ಯಗಳು ಬಿರು ಬೇಸಗೆಯ ಬಿಸಿಯಾದ ಗಾಳಿಯ ವಾತಾವರಕ್ಕೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ (ಏಪ್ರಿಲ್ 28) ಎಚ್ಚರಿಸಿದೆ. ದೇಶದ ಬಹುತೇಕ ಭಾಗಗಳಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಇದು ದುಡಿಮೆಯೆ ದೊಡ್ಡಪ್ಪ ಎನ್ನುವ ಕಾಲ: ಸ್ವ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ
ಭಾರತದ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ ಐದು ದಿನಗಳ ಕಾಲ ದೇಶದ ಹಲವೆಡೆ ಅತಿಯಾದ ಸೆಖೆಯ ವಾತಾವರಣ ಇರಲಿದೆ ಎಂದು ಭವಿಷ್ಯ ನುಡಿದಿದೆ. ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನಕ್ಕಿಂತ ಶೇ.2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ ಎಂದು ಹೇಳಿದೆ.
ರಾಜಸ್ಥಾನ್, ದೆಹಲಿ, ಹರ್ಯಾಣ, ಉತ್ತರಪ್ರದೇಶ ಮತ್ತು ಒಡಿಶಾದ ವಿವಿಧ ಭಾಗಗಳಲ್ಲಿ ದಾಖಲೆ ಪ್ರಮಾಣದ ತಾಪಮಾನ ಇರಲಿದೆ. ಮೇ ಮೊದಲ ವಾರದವರೆಗೂ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ನಂತರ ಮಳೆ ಆರಂಭವಾದರೆ ತಾಪಮಾನ ಇಳಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಆರ್ ಕೆ ಜೆನಮಣಿ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ದೆಹಲಿಯಲ್ಲಿ 43 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ಶುಕ್ರವಾರದಂದು 44 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ವಿವರಿಸಿದೆ.
ಬೆಂಗಳೂರಿನಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ಉಡುಪಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ಮುಂದಿನ ಎರಡು-ಮೂರು ದಿನಗಳ ಕಾಲ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಚಳಿಗಾಲದ ಪ್ರದೇಶವಾದ ಜಮ್ಮು-ಕಾಶ್ಮೀರ ಕೂಡಾ ಅತೀ ಹೆಚ್ಚು ತಾಪಮಾನಕ್ಕೆ ಸಾಕ್ಷಿಯಾಗಿದ್ದು, ಇಂದು 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಒಡಿಶಾದಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಅತಿಯಾದ ತಾಪಮಾನದಿಂದಾಗಿ ಪಶ್ಚಿಮಬಂಗಾಳ ಸರ್ಕಾರ ಶೈಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದೆ. ಶಾಲಾ-ಕಾಲೇಜುಗಳಿಗೆ ಮೇ 2ರವರೆಗೆ ರಜೆ ಘೋಷಿಸಿರುವುದಾಗಿ ವರದಿ ಹೇಳಿದೆ.