Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗಿನಿಂದಲೇ ಭಾರೀ ಮಳೆಯಾಗಿದ್ದು, ಸಂಜೆ, ರಾತ್ರಿ ವೇಳೆ ಬಿರುಸುಗೊಂಡಿತ್ತು. ಮಳೆಯಿಂದಾಗಿ ನಗರದ ಅನೇಕ ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೆಲವು ಕಡೆಗಳಲ್ಲಿ ಗಣೇಶೋತ್ಸವ ಮೆರವಣಿಗೆಗೆ ತೊಂದರೆ ಉಂಟಾಯಿತು.
ಯಾಗಿದೆ. ಪಯಸ್ವಿನಿಯೂÉ ಏರಿಕೆಯಾಗಿದೆ. ಬೆಳ್ಳಾರೆ-ಸುಳ್ಯ ರಸ್ತೆಯ ಐವರ್ನಾಡು ಬಳಿ ರಸ್ತೆಗೆ ಮರ ಬಿದ್ದು, ಸ್ವಲ್ಪ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಳ್ಯ, ಪುತ್ತೂರು, ಉಳ್ಳಾಲ, ಉಪ್ಪಿನಂಗಡಿ, ಬೆಳ್ತಂಗಡಿ, ಧರ್ಮಸ್ಥಳ, ವಿಟ್ಲ, ಬಂಟ್ವಾಳ, ಸುರತ್ಕಲ್, ವೇಣೂರು, ಮಡಂತ್ಯಾರು ಸೇರಿದಂತೆ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯ ಶಿರ್ವ, ಬ್ರಹ್ಮಾವರ, ತೆಕ್ಕಟ್ಟೆ ಕಾಪುವಿನಲ್ಲಿ ನಿರಂತರ ಮಳೆಯಾಗಿದೆ. ಉಡುಪಿ, ಕುಂದಾಪುರದಲ್ಲಿ ಸಾಧಾರಣ ಮಳೆಯಾಗಿದೆ.
Related Articles
ಭಾರತೀಯ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಸೆ.5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಅಲ್ಲದೆ ಸುಮಾರು 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ, ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ಮುನ್ಸೂಚನೆ ನೀಡಿದೆ.
Advertisement
ಇಂದು ಶಾಲೆ – ಕಾಲೇಜು ರಜೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೆ.5ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಮತ್ತು ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟ್ರೋಲ್ ಫ್ರೀ ಸಂಖ್ಯೆ 24×7 ಕಂಟ್ರೋಲ್ ರೂಂ 08272-221077 ಹಾಗೂ ವ್ಯಾಟ್ಸ್ ಆಪ್ ನಂ. 8550001077 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಬುಧವಾರ ತೀವ್ರವಾಗಿದೆ. ಜೀವನದಿ ಕಾವೇರಿ ಮತ್ತೆ ಉಕ್ಕಿ ಹರಿಯಲಾರಂಭಿಸಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿರುವುದರಿಂದ ಭಾಗಮಂಡಲವನ್ನು ಸಂಪರ್ಕಿಸುವ ರಸ್ತೆಗಳು ಜಲಾವೃತಗೊಂಡಿವೆ.
ಮಡಿಕೇರಿ-ಮಂಗಳೂರು ಮುಖ್ಯ ರಸ್ತೆಯ ಜೋಡುಪಾಲದಲ್ಲಿ ಬುಧವಾರ ಬೆಳಗ್ಗೆ ಭಾರೀ ಗಾತ್ರದ ಮರ ಉರುಳಿ ಬಿದ್ದಿದೆ. ರಸ್ತೆಯ ಕೆಲವೆಡೆಗಳಲ್ಲಿ ಬರೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು.