ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಳೆದೆರಡು ದಿನದಿಂದ ಸುರಿಯುತ್ತರುವ ಧಾರಾಕಾರ ಮಳೆ ಇಂದೂ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ನಿನ್ನೆಯಿಂದ ಎಡಬಿಡದೇ ಮಳೆ ಸುರಿಯುತ್ತಿದೆ.
ಜಿಲ್ಲೆಯ ನಿರಂತರ ಮಳೆಯಿಂದ ನದಿಗಳ ಹರಿವು ಹೆಚ್ಚಳವಾಗುತ್ತಿದೆ. ಭದ್ರಾ, ತುಂಗಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 62,224 ಕೋವಿಡ್ ಪ್ರಕರಣ ಪತ್ತೆ, 2,542 ಸಾವು
ಮೂಡಿಗೆರೆಯ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಾಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿನಾಡಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಹಲವೆಡೆ ಮರಗಳು ಬಿದ್ದಿರುವ ಕಾರಣ ಮಲೆನಾಡಿನ ಕೆಲ ಭಾಗದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ.