Advertisement

ಶಿರ್ವ ಪೇಟೆಯಲ್ಲಿ ಭಾರೀ ಜನಜಂಗುಳಿ: ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

11:50 AM Jun 01, 2021 | Team Udayavani |

ಶಿರ್ವ: ಶಿರ್ವ ಗ್ರಾ.ಪಂ.ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದು, ರಸ್ತೆಯುದ್ದಕ್ಕೂ ವಾಹನಗಳ ಸಾಲು ಕಂಡುಬಂದಿದೆ.

Advertisement

ಶಿರ್ವದಲ್ಲಿ 50ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿರುವುದರಿಂದ ಜಿಲ್ಲಾಧಿಕಾರಿಯವರ ಆದೇಶ ದಂತೆ ಜೂ.2 ರಿಂದ   5ರ ವರೆಗೆ ಸಂಪೂರ್ಣ ಲಾಕ್ಡೌನ್ ವಿಧಿಸಲಾಗಿದೆ. ಈ  ಹಿನ್ನೆಲೆಯಲ್ಲಿ ಶಿರ್ವ ಪೇಟೆಯ ಅಂಗಡಿಗಳಲ್ಲಿ ಭಾರೀ ಜನಸಂದಣಿ ಕಂಡುಬಂದಿದ್ದು ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದಾರೆ. ಮಾತ್ರವಲ್ಲದೆ  ರಸ್ತೆಯಲ್ಲಿ ವಾಹನಗಳ ಸಾಲೇ ಇದೆ.

ಮಂಗಳವಾರ ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಜನರು ಜಮಾಯಿಸಿದ್ದು, ಸಾಮಾಜಿಕ ಅಂತರ ಇಲ್ಲದಂತಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next