Advertisement

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

10:28 AM Nov 19, 2024 | Team Udayavani |

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಆಂಧ್ರಪ್ರದೇಶ ಮೂಲದ ಎಲೆಕ್ಟ್ರಾನಿಕ್‌ ಸಿಟಿಯ ದೀಪಾ (36) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ದೀಪಾ ಗೃಹಿಣಿಯಾಗಿದ್ದರೆ, ಇವರ ಪತಿ ಲೇತ್‌ ಕೆಲಸ ನಿರ್ವಹಿಸುತ್ತಿದ್ದರು.

ಪತಿ ಸುರೇಶ್‌ ದೊಡ್ಡ ಮೊತ್ತದ ಸಾಲ ಮಾಡಿಕೊಂಡಿ ದ್ದರು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಸೋಮವಾರವೂ ದಂಪತಿ ನಡುವೆ ಇದೇ ವಿಚಾರಕ್ಕೆ ಜಗಳ ನಡೆದಿತ್ತು. ಇದರಿಂದ ನೊಂದ ದೀಪಾ ಮನೆಯ ಕೋಣೆಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನು ಗಮನಿಸಿದ ಪತಿ ಪತ್ನಿ ದೀಪಾಳನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೆ ದಾಖಲಿಸಿದ್ದ. ಚಿಕಿತ್ಸೆ ಫ‌ಲಿಸದೇ ದೀಪಾ ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದಿದ್ದು, ತನಿಖೆ ಬಳಿಕ ನಿಖರವಾಗಿ ಸಾವಿಗೆ ಕಾರಣವೇನು ಎಂಬುದು ತಿಳಿದು ಬರಲಿದೆ.  ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next