Advertisement

ಸಿಡಿಲಬ್ಬರದ ಮಳೆಗೆ 6 ಬಲಿ

06:00 AM Sep 26, 2018 | Team Udayavani |

ಬೆಂಗಳೂರು: ರಾಜ್ಯದ ಕೆಲವೆಡೆ ಮಂಗಳವಾರವೂ ಮಳೆ ಅಬ್ಬರಿಸಿದ್ದು, ಸಿಡಿಲಬ್ಬರದ ಮಳೆಗೆ ಆರು ಮಂದಿ ಬಲಿಯಾಗಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕಾನಿಹಾಳದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು
ಯಲಗೂರಪ್ಪ ಯರಝರಿ (25) ಹಾಗೂ ವಿಠ್ಠಲ ವಡವಡಗಿ (20) ಮೃತಪಟ್ಟಿದ್ದಾರೆ. ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮದಲ್ಲಿ ಮಂಗಳಾ ಜಲಪುರ (38) ಎಂಬುವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲಿಗೆ ಬಲಿಯಾಗಿದ್ದಾರೆ.

Advertisement

ಕೊಪ್ಪಳ ತಾಲೂಕಿನ ಹಲುವಾಗಲಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸುರೇಶ ಹಳ್ಳಿ (42) ಎಂಬುವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಮುಳಗುಂದ ಪಟ್ಟಣದ ಹೊರವಲಯದಲ್ಲಿ ಹೊಲದಲ್ಲಿ ಶೇಂಗಾ ಕೀಳುತ್ತಿದ್ದಾಗ ಸಿಡಿಲು ಬಡಿದು ಪಟ್ಟಣದ ಶೇಖ ಓಣಿ ನಿವಾಸಿ ನೂರಜಾನ ಹುಸೇನಸಾಬ ಕಿಂಡ್ರಿ (40) ಎಂಬುವರು ಅಸುನೀಗಿದ್ದಾರೆ. ಇನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿ ಅಲ್ತಾಬ್‌ ನಾಯ್ಕರ್‌
(20) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. 

ಈ ಮಧ್ಯೆ, ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಹೆಸರಘಟ್ಟದಲ್ಲಿ ರಾಜ್ಯದಲ್ಲಿಯೇ ಅಧಿಕ, 6 ಸೆಂ.ಮೀ. ಮಳೆ ಸುರಿಯಿತು. ಗುರುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next