Advertisement
ತಾಲೂಕಿನ ಕೂತನೂರು ರಸ್ತೆ, ಮಡಹಳ್ಳಿ ರಸ್ತೆ, ತೆರಕಣಾಂಬಿ ರಸ್ತೆ ಮಾರ್ಗವಾಗಿ ಪ್ರತಿನಿತ್ಯ ನೂರಾರು ಟಿಪ್ಪರ್ ಲಾರಿಗಳು ಅಧಿಕ ಭಾರ ಹೊತ್ತು ಸಾಗುತ್ತವೆ. ಇದರ ಅರಿವಿದ್ದರೂ ಸಹ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಇದನ್ನು ಗಮನಿಸಿದರೆ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂದು ಪುರಸಭೆ ಸದಸ್ಯ ರಾಜಗೋಪಾಲ್ ಆರೋಪಿಸಿದ್ದಾರೆ.
Related Articles
Advertisement
ನೆಪ ಮಾತ್ರಕ್ಕೆ ತಪಾಸಣೆಅಧಿಕ ಭಾರ ಹೊತ್ತ ಟಿಪ್ಪರ್ ಲಾರಿಗಳು ಹೆದ್ದಾರಿಯಲ್ಲಿ ಸಂಚರಿಸುವ ಕುರಿತು ಸಾರ್ವಜನಿಕರಿಂದ ಆಕ್ರೋಶ ಕೇಳಿಬಂದ ಸಂದರ್ಭ ಹಾಗೂ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ವೇಳೆ ಪೊಲೀಸರು ಹಾಗೂ ಆರ್‌ಟಿಒ ಅಧಿಕಾರಿಗಳು ಕೇವಲ ನೆಪಮಾತ್ರಕ್ಕೆ ಮಾತ್ರ ತಪಾಸಣೆ ನಡೆಸಿ ಸುಮ್ಮನಾಗುತ್ತಾರೆ. ನಂತರ ಯಥಾಸ್ಥಿತಿಯಲ್ಲಿ ಟಿಪ್ಪರ್‌ಗಳು ಸಂಚರಿಸುತ್ತವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ವಹಿಸಬೇಕೆಂದು ಪಟ್ಟಣದ ನಿವಾಸಿ ರಾಜು ಒತ್ತಾಯಿಸಿದ್ದಾರೆ. ಹೆದ್ದಾರಿಯಲ್ಲಿ ಓವರ್‌ಲೋಡ್ ಹಾಕಿಕೊಂಡು ಸಂಚರಿಸುತ್ತಿರುವ ಟಿಪ್ಪರ್‌ಗಳನ್ನು ಪರಿಶೀಲನೆ ನಡೆಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.
●ಮುದ್ದುರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಹೆದ್ದಾರಿಯಲ್ಲಿ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಲಾರಿಗಳನ್ನು ಕಟ್ಟುನಿಟ್ಟಿನ ತಪಾಸಣೆ ನಡೆಸಲು ಈಗಾಗಲೇ ತಾಲೂಕು ಆಡಳಿತದಿಂದ ಪೊಲೀಸರು ಹಾಗೂ ಆರ್‌ಟಿಒ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಾಗ್ಯೂ ನಿಯಮ ಮೀರಿ ಸಂಚರಿಸುವುದು ಕಂಡು ಬಂದರೆ ಸೂಕ್ತ ಕ್ರಮ
ಜರುಗಿಸಲಾಗುವುದು.
● ಸಿ.ಜಿ.ರವಿಶಂಕರ್, ತಹಶೀಲ್ದಾರ್, ಗುಂಡ್ಲುಪೇಟೆ *ಬಸವರಾಜು ಎಸ್.ಹಂಗಳ