Advertisement

ಹಿಂದೂ ಸೇನಾದ ತೆರವು ಬೆದರಿಕೆ : ಶಹೀನಾ ಬಾಘ್ ನಲ್ಲಿ ಪೊಲೀಸ್ ಸರ್ಪಗಾವಲು

09:59 AM Mar 02, 2020 | Hari Prasad |

ನವದೆಹಲಿ: ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸಮೀಪವಿರುವ ಶಹೀನ್ ಬಾಘ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ ಡಿಸೆಂಬರ್ 15ರಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸಿ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲು ಹಿಂದು ಸೇನಾ ಸಂಘಟನೆಯೊಂದು ಮಾರ್ಚ್ 1ಕ್ಕೆ ಅಂತಿಮ ಗಡು ನೀಡಿದ್ದ ಹಿನ್ನಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದಲ್ಲಿ ಇಂದು ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ.

Advertisement

ಕಳೆದ ಎರಡು ತಿಂಗಳುಗಳಿಂದ ಶಹೀನಾಬಾಘ್ ರಸ್ತೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ನಿರಂತರ ಪ್ರತಿಭಟನೆ ನಡೆಸುತ್ತಿದ್ದು ಇವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹಿಂದೂ ಸೇನಾ ಎಂಬ ಬಲಪಂಥೀಯ ಸಂಘಟನೆಯೊಂದು ಶಹೀನಾ ಬಾಘ್ ರಸ್ತೆಯನ್ನು ಮಾರ್ಚ್ 1ರ ಒಳಗಾಗಿ ತೆರವುಗೊಳಿಸುವಂತೆ ಪ್ರತಿಭಟನಾಕಾರರಿಗೆ ಅಂತಿಮ ಗಡುವನ್ನು ವಿಧಿಸಿತ್ತು.

ಆದರೆ ಪೊಲೀಸರ ಒತ್ತಡಕ್ಕೆ ಮಣಿದು ಇಂದು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಹಿಂದೆ ಪಡೆದುಕೊಂಡಿರುವುದಾಗಿ ಹಿಂದೂ ಸೇನಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆದರೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಈ ಪ್ರದೇಶದಲ್ಲಿ ಇದೀಗ ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next