Advertisement

Heavy rain: ಹಲವು ರಾಜ್ಯಗಳಿಗೆ ಅಲರ್ಟ್‌

11:16 PM Jul 06, 2023 | Team Udayavani |

ಹೊಸದಿಲ್ಲಿ: ದೇಶದ ಹಲವೆಡೆ ಭಾರೀ ಮಳೆ ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ¬ “ರೆಡ್‌ ಹಾಗೂ ಆರೆಂಜ್‌ ಅಲರ್ಟ್‌’ ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

ಗೋವಾದಲ್ಲಿ ಗುರುವಾರ 24 ಗಂಟೆಗಳ ಅವಧಿಯಲ್ಲಿ ವರುಣನ ಅಬ್ಬರಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡು, ಪ್ರವಾಹದ ನೀರಲ್ಲಿ 56 ವರ್ಷದ ಮಹಿಳೆಯೊಬ್ಬರು ಕೊಚ್ಚಿಹೋಗಿದ್ದಾರೆ. ಹಲವು ಮರಗಳು ಧರಾಶಾಯಿಯಾಗಿವೆ. ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಇತರ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಮಳೆಯಿಂದಾಗಿ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಶಾಲೆ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ. ತಗ್ಗುಪ್ರದೇಶಗಳ ಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ರಾಜಧಾನಿ ದಿಲ್ಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗುರುವಾರ ಹಲವು ರಸ್ತೆಗಳು ಜಲಾವೃತಗೊಂಡು, ಸಂಚಾರ ದಟ್ಟಣೆ ಉಂಟಾಯಿತು. ಮಹಾರಾಷ್ಟ್ರದ ಮುಂಬಯಿಯಲ್ಲಿ ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಪಾಕ್‌ನಲ್ಲಿ 11 ಸಾವು: ಪಾಕಿಸ್ಥಾನದ ಪಂಜಾಬ್‌ ಪ್ರಾಂತದಲ್ಲೂ ದಾಖಲೆಯ ಮಳೆಯಾಗುತ್ತಿದ್ದು, ಒಂದೇ ದಿನ 11 ಮಂದಿ ಸಾವಿಗೀಡಾಗಿದ್ದಾರೆ. ಜು. 8ರ ವರೆಗೂ ಇಲ್ಲಿ ಮಳೆ, ಪ್ರವಾಹ ಸ್ಥಿತಿ ಮುಂದು ವರಿಯಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next