ನವ ದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ ಭಾರತದ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ರವಿವರದವರೆಗೆ ಒಟ್ಟು ಮಳೆಯ ಹೊಡೆತಕ್ಕೆ ಸಿಲುಕಿ ೧೯ ಮಂದಿ ಜೀವ ಕಳೆದುಕೊಂಡಿದ್ದಾರೆ ಅಲ್ಲದೆ ಹಿಮಾಚಲ, ಪಂಜಾಬ್, ದೆಹಲಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಮಳೆಯ ಹೊಡೆತಕ್ಕೆ ರಾಷ್ಟ್ರೀಯ ಹೆದ್ದಾರಿ, ಬೇರೆ ಬೇರೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಕೊಚ್ಚಿ ಹೋಗಿದ್ದು ಹಲವಾರು ಮಂದಿ ಅತಂತ್ರಗೊಂಡಿದ್ದರೆ.
ದೆಹಲಿಯ ಕೆಲವು ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದ ಹತ್ತು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಗುಡ್ಡಗಾಡು ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಜುಲೈ 11, ಮಂಗಳವಾರದವರೆಗೆ ಉತ್ತರಾಖಂಡದಲ್ಲಿ ಹೆಚ್ಚು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಷ್ಟು ಮಾತ್ರವಲ್ಲದೆ ಹರಿಯಾಣ ಯಮುನಾ ನದಿಗೆ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ಗಳಷ್ಟು ನೀರನ್ನು ಬಿಟ್ಟಿದ್ದರಿಂದ ರಾಜ್ಯ ಸರ್ಕಾರವು ಪ್ರವಾಹದ ಎಚ್ಚರಿಕೆಯನ್ನು ಕೂಡಾ ನೀಡಿದೆ.
ಇದನ್ನೂ ಓದಿ: ಪ. ಬಂಗಾಳದಲ್ಲಿ ಪಂಚಾಯತ್ ಚುನಾವಣೆ ; 696 ಬೂತ್‌ಗಳಲ್ಲಿ ಇಂದು ಮರು ಮತದಾನ