Advertisement
ಹೆಬ್ರಿ ಹುತ್ತುರ್ಕೆ ಬಳಿ ಸಿಡಿಲು ಬಡಿದ ಪರಿಣಾಮ ವಿದ್ಯುತ್ ಪರಿವರ್ತಕ ಸ್ಫೋಟಗೊಂಡು ಮೆಸ್ಕಾಂಗೆ ಸುಮಾರು 1.25 ಲಕ್ಷ ರೂ ನಷ್ಟ ಸಂಭವಿಸಿದೆ. ಪರಿಸರದ ಮನೆಗಳ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ.
ಹೆಬ್ರಿ, ಕುಚ್ಚಾರು ಗ್ರಾಮದ ಕೃಷ್ಣಯ್ಯ ಶೆಟ್ಟಿ ಅವರ ದನವೊಂದು ಸಿಡಿಲು ಬಡಿದು ಮೃತಪಟ್ಟಿದೆ. ಮಂಗಳವಾರ ಹಲವೆಡೆ ಬಿಟ್ಟುಬಿಟ್ಟು ಮಳೆ ಸುರಿದಿದೆ. ಮಣಿಪಾಲ, ಉಡುಪಿ, ಪರ್ಕಳ ಸುತ್ತಮುತ್ತ ಕೆಲಕಾಲ ಉತ್ತಮ ಮಳೆಯಾಗಿದೆ. ದ.ಕ. ಜಿಲ್ಲೆಯ ಪುತ್ತೂರು, ಸುಳ್ಯ ಮತ್ತು ಮಂಗಳೂರು ತಾಲೂಕಿನ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮಳೆ ಬಿರುಸು ನಿರೀಕ್ಷೆ
ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಅ. 19, 21 ಮತ್ತು 22ರಂದು ಎಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಅಲ್ಪಸ್ವಲ್ಪ ಮಳೆಯಾಗಿದೆ. ಸೆಕೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ30 ಡಿ.ಸೆ. ಗರಿಷ್ಠ 24.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.