Advertisement
4 ತಿಂಗಳ ಮಳೆಯ ಋತುವಿನ ಪೈಕಿ 2 ತಿಂಗಳು ಈಗಾಗಲೇ ಮುಗಿದಿದ್ದು, ಇನ್ನೆರಡು ತಿಂಗಳಲ್ಲಿ ದೇಶಾದ್ಯಂತ ವಾಡಿಕೆ ಮಳೆಯಾಗಲಿದೆ ಎಂದು ಇಲಾಖೆ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ. ಪಶ್ಚಿಮ ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರದ ಒಳನಾಡು, ಜಮ್ಮು-ಕಾಶ್ಮೀರ, ಲಡಾಕ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳ ಕೆಲವು ಭಾಗಗಳಲ್ಲಿ ಆಗಸ್ಟ್ ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಆದರೆ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರದ ರಾಯಲಸೀಮಾ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್, ಈಶಾನ್ಯ ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ಶಿಯೋಪುರ ಜಿಲ್ಲೆಯಲ್ಲಿ ಜಲಾವೃತವಾದ ಕಟ್ಟಡದ ಮೇಲೆ 60 ಮಂದಿ ಸಿಲುಕಿಕೊಂಡಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ನೆರೆದಿದ್ದಾಗ, ಕಟ್ಟಡದೊಳಕ್ಕೆ ನೀರು ನುಗ್ಗಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ. ಇನ್ನು, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.