ಚಿಕ್ಕಬಳ್ಳಾಪುರ: ಚಿಕ್ಕಳ್ಳಾಪುರ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇಡೀ ಸುರಿದ ಭರ್ಜರಿ ಮಳೆಯಿಂದ ಗಾಳಿಗೆ ಬೃಹತ್ ಗಾತ್ರದ ಮರ ನೆಲಕ್ಕುರುಳಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ.
ನಗರ ಸೇರಿದಂತೆ ತಾಲೂಕಿನಾದ್ಯಂತ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ. ಮಳೆಯ ಆರ್ಭಟಕ್ಕೆ ಸುಲ್ತಾನ್ ಪೇಟೆ ಬಳಿ ಬೃಹತ್ ಗಾತ್ರದ ಮರ ನೆಲಕ್ಕುರುಳಿ ಕೋಲಾರ ಸೋಂಪುರ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಸಹ ನೆಲಕ್ಕೆ ಉರುಳಿದ್ದು ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಮುಂದಾಗಿದ್ದಾರೆ. ರಾತ್ರಿ ಸುರಿದ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಅಧಿಕಾರಿಗಳು ದೌಡಾಯಿಸಿದ್ದಾರೆ.