ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ಕೋಟ್ಯಾಂತರ ಬೆಳೆಬಾಳುವ ಬೆಳೆಗಳು ನೀರುಪಾಲಾಗಿದೆ.
ನಗರದಲ್ಲಿ ಸುಮಾರು ವರ್ಷಗಳ ಬಳಿಕ ಈ ರೀತಿಯ ಮಳೆಯಾಗಿದ್ದು ತಗ್ಗುಪ್ರದೇಶಗಳು ಜಲಾವೃತಗೊಂಡು ನುಮನೆಯಲ್ಲಿದ್ದ ದವಸಧಾನ್ಯಗಳು ನೀರುಪಾಲಾಗಿದೆ ಮತ್ತೊಂದೆಡೆ ಹೊಲಗಳಿಗೆ ನೀರು ನುಗ್ಗಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.
ನಗರದ ಪ್ರತಿಷ್ಠಿತ ಡಿವೈನ್ ಬಡಾವಣೆಯಲ್ಲಿ ನೀರು ನುಗ್ಗಿ ಬಡಾವಣೆಯ ಜನರು ರಾತ್ರಿಯಿಡೀ ಜಾಗರಣೆ ಮಾಡುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ ಮಳೆಯ ಆರ್ಭಟಕ್ಕೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಇಲ್ಲದ ಕಾರಣ ನೀರು ನಂದಿಗೆ ವಿಷಜಂತುಗಳು ಸಹ ಬಡಾವಣೆಗೆ ನುಗ್ಗಿದ್ದರಿಂದ ನಾಗರಿಕರು ಆತಂಕಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಗೌರಿಬಿದನೂರು ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಉದಗಟ್ಟಿ ಲಾರಿಯೊಂದು ಸಹ ಮಗುಚಿ ಬಿದ್ದಿದ್ದು ವಾಹನ ಸವಾರರು ಕಿರಿಕಿರಿಯನ್ನು ಅನುಭವಿಸುವಂತಾಗಿದೆ ಅದರಲ್ಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಷಯ ತಿಳಿದು ಕೂಡಲೇ ಜಿಲ್ಲಾಧಿಕಾರಿ ಆರ್ ಲತಾ ಅವರು ಸ್ಥಳಕ್ಕೆ ಧಾವಿಸಿ ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದ್ದಾರೆ ಜೊತೆಗೆ ಮಳೆ ನೀರು ಸರಾಗವಾಗಿ ಹರಿಯಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಜಿಲ್ಲಾಧಿಕಾರಿಗಳು ಕೇವಲ ಭರವಸೆ ನೀಡಿದರಲ್ಲದೆ ಸುಮಾರು ನಾಲ್ಕು ಜೆಸಿಬಿಗಳ ಸಹಾಯದಿಂದ ಮಳೆ ನೀರು ಚರಂಡಿಗಳಲ್ಲಿ ಹರಿಯಲು ವ್ಯವಸ್ಥೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಕೆಲವರು ಬಾಲರಾಜ ಕಾರ್ಯಗಳನ್ನು ಮತ್ತು ಕೆರೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕೆಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಎಂದೆಂದೂ ಕಾಣದಂತಹ ಮಳೆ ಬಿದ್ದರೂ ಸಹ ನಾಗರಿಕರು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಜನಪ್ರತಿನಿಧಿಗಳು ಸ್ಥಳಕ್ಕೆ ಧಾವಿಸಿ ಇಲ್ಲವೆಂದು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ 9 ನೇ ವಾರ್ಡಿನಲ್ಲಿ ಸಹ ನೀರು ಸರಾಗವಾಗಿ ಹರಿಯದೆ ಮನೆಗಳಿಗೆ ನುಗ್ಗಿ ರುವ ಘಟನೆ ನಡೆದಿದೆ ವಿಷಯ ತಿಳಿದು ಕೂಡಲೇ ನಗರಸಭಾ ಸದಸ್ಯ ಮಟ್ಟ ಮಪ್ಪ ಭೇಟಿ ನೀಡಿ ಅಧಿಕಾರಿಗಳ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ನಗರಸಭೆ ವ್ಯಾಪ್ತಿಯಲ್ಲಿ ಬಹುತೇಕ ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ತುಳುಕಾಡುತ್ತಿತ್ತು ಅದನ್ನು ಅದನ್ನು ಸ್ವಚ್ಛಗೊಳಿಸಿದ ಕಾರಣ ಯಾವತರ ಸಂಭವಿಸಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.